ಮಂಗಳವಾರ, ಆಗಸ್ಟ್ 3, 2021
22 °C

ಧರ್ಮರಾಯಸ್ವಾಮಿ, ದ್ರೌಪತಮ್ಮ ಹೂವಿನ ಕರಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ತಾಲ್ಲೂಕಿನ ಜಂಗಮಕೋಟೆಯ ತೊಟ್ಟಿಬಾವಿಯ ಶ್ರೀ ಧರ್ಮರಾಯಸ್ವಾಮಿ ಮತ್ತು ಶ್ರೀ ದ್ರೌಪತಮ್ಮನವರ ಹೂವಿನ ಕರಗ ಮಹೋತ್ಸವವನ್ನು ಗುರುವಾರ ರಾತ್ರಿ ವಿಜೃಂಭಣೆಯಿಂದ ಆಚರಿಸಲಾಯಿತು.

ಕರಗದ ಪ್ರಯುಕ್ತ ವಾದ್ಯಗೋಷ್ಠಿಯನ್ನು ಆಯೋಜಿಸಲಾಗಿತ್ತು. ವಹ್ನೀಕುಲ ಕ್ಷತ್ರಿಯ ಕುಲದ ಜಂಗಮಕೋಟೆ ಸುಬ್ರಮಣಿ ಅವರು ರಾತ್ರಿಯಿಡೀ ಕರಗವನ್ನು ಹೊತ್ತು ತಮಟೆಯ ವಾದನ ತಂಡದೊಂದಿಗೆ ಗ್ರಾಮವೆಲ್ಲಾ ಸುತ್ತಿದಾಗ ದಾರಿಯುದ್ದಕ್ಕೂ ಮಲ್ಲಿಗೆ ಹೂಗಳನ್ನು ಅರ್ಪಿಸಿ, ಆರತಿ ಬೆಳಗುತ್ತಿದ್ದರು. ಕೆಲವೆಡೆ ಕರಗದ ಆಗಮನಕ್ಕಾಗಿ ರಸ್ತೆಯ ಮೇಲೆಲ್ಲಾ ರಂಗೋಲಿಯನ್ನು ಬಿಡಿಸಲಾಗಿತ್ತು. ರಸ್ತೆಯನ್ನು ಬಣ್ಣಬಣ್ಣದ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

ಮಣ್ಣಿನ ಮಡಿಕೆಗೆ ಜಲ ತುಂಬಿಸಿ, ಅದಕ್ಕೆ ಅರಿಶಿನ, ಕುಂಕುಮ ಹೂಗಳಿಂದ ಅಲಂಕರಿಸಿ ಅದರ ಮೇಲೆ ಗೋಪುರದಂತೆ ಮಲ್ಲಿಗೆ ಹೂವಿನ ಹಾರಗಳನ್ನು ಇಳಿಬಿಡಲಾಗಿತ್ತು.

ವೀರಕುಮಾರರು ಅಲಗು ಸೇವೆ ಮಾಡಿದರು. ಹಲಗೆ, ತಮಟೆ ವಾದ್ಯಗಳೊಂದಿಗೆ ಕರಗ ದೇವಾಲಯದ ಪ್ರದಕ್ಷಿಣೆ ಮಾಡಿ ನರ್ತಿಸಿತು. ಮುಂದೆ ಕತ್ತಿ ಹಿಡಿದ ವೀರಕುಮಾರರು, ಹಿಂದೆ ಕುಣಿಯುತ್ತಾ ಕರಗ ರಾತ್ರಿಯಿಡೀ ಊರೆಲ್ಲಾ ಸಂಚರಿಸಿತು. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ರಂಗೋಲಿ ಹಾಕಿ ಅಲ್ಲಿಗೆ ಕರಗ ಬರುತ್ತಿದ್ದಂತೆ ಭಕ್ತಿಯಿಂದ ಆರತಿ ಬೆಳಗಿ ಮಲ್ಲಿಗೆ ಹೂಗಳನ್ನು ಸಮರ್ಪಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು