ಸಾಷ್ಟಾಂಗ ನಮಸ್ಕಾರ ಮಾಡಿ ಕರೆತರಲಿದ್ದೇವೆ: ಮಹಾದೇಶ್ವರ ಸ್ವಾಮೀಜಿ ತಿರುಗೇಟು

ಸೋಮವಾರ, ಮೇ 20, 2019
32 °C
ಶ್ರೀಶೈಲ ಶ್ರೀ ಹೇಳಿಕೆಗೆ ಕೂಡಲಸಂಗಮ ಬಸವಧರ್ಮ ಪೀಠ

ಸಾಷ್ಟಾಂಗ ನಮಸ್ಕಾರ ಮಾಡಿ ಕರೆತರಲಿದ್ದೇವೆ: ಮಹಾದೇಶ್ವರ ಸ್ವಾಮೀಜಿ ತಿರುಗೇಟು

Published:
Updated:
Prajavani

ಬಾಗಲಕೋಟೆ: ‘ಬಸವಣ್ಣನೇ ಧರ್ಮಗುರು, ವಚನಗಳೇ ಧರ್ಮಗ್ರಂಥ ಎಂದು ಶ್ರೀಶೈಲಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯರು ಒಪ್ಪಿಕೊಂಡು ಬಹಿರಂಗವಾಗಿ ಘೋಷಿಸಲಿ. ಸಾಷ್ಟಾಂಗ ನಮಸ್ಕಾರ ಮಾಡಿ ನಾವೇ ಅವರನ್ನು ಲಿಂಗಾಯತ ಧರ್ಮಕ್ಕೆ ಕರೆತರಲಿದ್ದೇವೆ. ಆಗ ಪ್ರತ್ಯೇಕ ಧರ್ಮದ ಬಿರುಗಾಳಿಯೂ ತಣ್ಣಗಾಗಲಿದೆ’ ಎಂದು ಕೂಡಲಸಂಗಮ ಬಸವಧರ್ಮ ಪೀಠದ ಮಹಾದೇಶ್ವರ ಸ್ವಾಮೀಜಿ ತಿರುಗೇಟು ನೀಡಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶ್ರೀಶೈಲ ಶ್ರೀಗಳ ಆಶಯದಂತೆ ಮರಿಮೊಮ್ಮಕ್ಕಳ ತನಕವೂ ಶಾಮನೂರು ಶಿವಶಂಕರಪ್ಪ ಕುಟುಂಬದವರೇ ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರಾಗಿ ಮುಂದುವರೆಯಲಿ ನಮ್ಮದೇನೂ ಅಭ್ಯಂತರವಿಲ್ಲ. ಆದರೆ ಬಸವಣ್ಣನೇ ಧರ್ಮಗುರು ಎಂದು ಒಪ್ಪಿಕೊಳ್ಳಲಿ. ಆ ಬಗ್ಗೆ ಬಹಿರಂಗ ಹೇಳಿಕೆ ನೀಡಲಿ’ ಎಂದು ಒತ್ತಾಯಿಸಿದರು.

‘ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಸಂಬಂಧಿಸಿದಂತೆ ಇನ್ನು ಮುಂದೆ ಕಾನೂನು ಹೋರಾಟ ಮುಂದುವರೆಯಲಿದೆ. ಸ್ವತಂತ್ರ ಧರ್ಮ ಮಾನ್ಯತೆ ಪಡೆದೇ ತೀರಲಿದ್ದೇವೆ’ ಎಂದರು.

‘ಸಚಿವ ಡಿ.ಕೆ.ಶಿವಕುಮಾರ್ ಒಕ್ಕಲಿಗ ಸಮಾಜದವರು. ಲಿಂಗಾಯತ ಧರ್ಮದ ಅನುಯಾಯಿ ಅಲ್ಲ. ಹಾಗಾಗಿಯೇ ಲಿಂಗಾಯತ ಚಳವಳಿ ವಿಚಾರದಲ್ಲಿ ಕ್ಷಮೆ ಕೇಳಲು ಶಿವಕುಮಾರ್ ಯಾರು ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಪ್ರಶ್ನಿಸಿದ್ದಾರೆ. ಅದರಲ್ಲಿ ತಪ್ಪೇನೂ ಇಲ್ಲ’ ಎಂದು ಶ್ರೀಗಳು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 31

  Happy
 • 2

  Amused
 • 0

  Sad
 • 0

  Frustrated
 • 5

  Angry

Comments:

0 comments

Write the first review for this !