ಶುಕ್ರವಾರ, ಸೆಪ್ಟೆಂಬರ್ 20, 2019
28 °C

ಮಸೂದ್‌ ಆಸ್ತಿ ಮುಟ್ಟುಗೋಲಿಗೆ ಆದೇಶ

Published:
Updated:
Prajavani

ಇಸ್ಲಾಮಾಬಾದ್‌: ಜೈಷ್‌–ಎ–ಮೊಹಮ್ಮದ್‌ (ಜೆಇಎಂ) ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್‌ ಅಜರ್‌ನ ಆಸ್ತಿಯನ್ನು ಮುಟ್ಟುಗೋಲು ಹಾಕಲು ಮತ್ತು ಆತನಿಗೆ ಪ್ರಯಾಣ ನಿಷೇಧ ಹೇರಲು ಪಾಕಿಸ್ತಾನ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಮಸೂದ್‌ನನ್ನು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ಘೋಷಿಸಿದ ಬಳಿಕ ಪಾಕಿಸ್ತಾನ ಈ ಕ್ರಮಕ್ಕೆ ಮುಂದಾಗಿದೆ.

ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ಖರೀದಿ ಮತ್ತು ಮಾರಾಟ ಮಾಡುವುದಕ್ಕೂ ಮಸೂದ್‌ಗೆ ನಿಷೇಧ ಹೇರಲಾಗಿದೆ.

 

Post Comments (+)