ಭಾನುವಾರ, ಸೆಪ್ಟೆಂಬರ್ 26, 2021
28 °C
ಸೋಡಾ ಬಾಟಲಿಯಿಂದ ತಲೆಗೆ ಹೊಡೆದಿದ್ದ ಆರೋಪಿ

ಬಾಟಲಿಯಿಂದ ಹೊಡೆದು ಕೊಲೆ: ಯುವಕ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವರ್ತೂರು ಮುಖ್ಯರಸ್ತೆಯಲ್ಲಿ ಗುರುವಾರ ರಾತ್ರಿ ನಡೆದ ಗಲಾಟೆ ವೇಳೆ ಗಾಯಗೊಂಡಿದ್ದ ಕಾರ್ತಿಕ್ ಎಂಬುವರು ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದು, ಕೊಲೆ ಆರೋಪದಡಿ ಗುರುಪ್ರಸಾದ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿ ಆಗಿದ್ದ ಕಾರ್ತಿಕ್, ಕಾರು ಚಾಲಕ. ಸ್ನೇಹಿತರ ಜೊತೆ ವರ್ತೂರು ಮುಖ್ಯರಸ್ತೆಯಲ್ಲಿರುವ ಬೇಕರಿಯೊಂದರ ಮುಂದೆ ಗುರುವಾರ ರಾತ್ರಿ ನಿಂತಿದ್ದರು. ಮದ್ಯದ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ಗಲಾಟೆ ಶುರುವಾಗಿತ್ತು. ಕಾರ್ತಿಕ್ ಹಾಗೂ  ಸ್ನೇಹಿತ ಗುರುಪ್ರಸಾದ್ ಪರಸ್ಪರ ಕೈ ಕೈ ಮಿಲಾಯಿಸಿದ್ದರು’ ಎಂದು ಪೊಲೀಸರು ಹೇಳಿದರು.

‘ಗುರುಪ್ರಸಾದ್ ಅವರ ಮುಖಕ್ಕೆ ಕಾರ್ತಿಕ್ ಪಂಚ್ ಮಾಡಿದ್ದರು. ಕೋಪಗೊಂಡ ಆರೋಪಿ, ಬೇಕರಿ ಹೊರಗಿದ್ದ ಸೋಡಾ ಬಾಟಲಿಯಿಂದ ತಲೆಗೆ ಹೊಡೆದಿದ್ದ. ತೀವ್ರ ಗಾಯಗೊಂಡ ಕಾರ್ತಿಕ್ ಅವರನ್ನು ಸ್ನೇಹಿತರೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ‘ನನಗೆ ಏನು ಆಗಿಲ್ಲ’ ಎಂದು ಕಾರ್ತಿಕ್ ಮನೆಗೆ ಹೋಗಿ ಮಲಗಿದ್ದರು.’

‘ಕಾರ್ತಿಕ್ ಅವರಿಗೆ ಶುಕ್ರವಾರ ಬೆಳಿಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ಖಾಸಗಿ ಆಸ್ಪತ್ರೆಗೆ ಅವರನ್ನು ಕರೆದೊಯ್ಯಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಕರೆದೊಯ್ಯುವಾಗ ಅವರು ಅಸುನೀಗಿದರು’ ಎಂದು ಪೊಲೀಸರು ಹೇಳಿದರು. 

‘ಗುರುಪ್ರಸಾದ್‌ ಹಲ್ಲೆ ಮಾಡಿದ್ದರಿಂದಲೇ ಕಾರ್ತಿಕ್ ಮೃತಪಟ್ಟಿದ್ದಾರೆಂದು ಸಂಬಂಧಿಕರು ಆರೋಪಿಸುತ್ತಿದ್ದಾರೆ. ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ವಿವರಿಸಿದರು.

‘ಆರೋಪಿ ಗುರುಪ್ರಸಾದ್ ಆಹಾರ ಸರಬರಾಜು ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ತಪ್ಪೊಪ್ಪಿಕೊಂಡಿ
ದ್ದಾನೆ’ ಎಂದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು