ತಾಯತ ಕಟ್ಟಿಸಿಕೊಂಡು ಬರುತ್ತಿದ್ದ ಸರಗಳ್ಳರು!

ಬುಧವಾರ, ಮೇ 22, 2019
24 °C
20 ಮಹಿಳೆಯರಿಂದ ಸರ ದೋಚಿದ್ದ ಇರಾನಿ ಗ್ಯಾಂಗ್

ತಾಯತ ಕಟ್ಟಿಸಿಕೊಂಡು ಬರುತ್ತಿದ್ದ ಸರಗಳ್ಳರು!

Published:
Updated:
Prajavani

ಬೆಂಗಳೂರು: ಮುಂಬೈನ ದರ್ಗಾದಲ್ಲಿ ಪೂಜೆ ಮಾಡಿಸಿದ ತಾಯತವನ್ನು ಕೈಗೆ ಕಟ್ಟಿಕೊಂಡು ವಿಮಾನದಲ್ಲಿ ನಗರಕ್ಕೆ ಬರುತ್ತಿದ್ದ ಕುಖ್ಯಾತ ‘ಇರಾನಿ ಗ್ಯಾಂಗ್‌’ ಸದಸ್ಯರಿಬ್ಬರು, ಒಂದೇ ದಿನ ಹಲವು ಮಹಿಳೆಯರಿಂದ ಚಿನ್ನದ ಸರಗಳನ್ನು ದೋಚಿ ಪರಾರಿಯಾಗುತ್ತಿದ್ದರು. ಇದೀಗ ಸಿ.ಸಿ ಟಿ.ವಿ ಕ್ಯಾಮೆರಾದ ದೃಶ್ಯಾವಳಿ ನೀಡಿದ ಸುಳಿವಿನಿಂದ ವಿದ್ಯಾರಣ್ಯಪುರ ಪೊಲೀಸರಿಗೆ ಸಿಕ್ಕಿಬಿದ್ದು ಜೈಲು ಸೇರಿದ್ದಾರೆ.

‘ಥಾಣೆಯ ಮಹಮದ್ ಅಲಿ (23), ಸೈಯದ್ ಕರಾರ್ ಹುಸೈನ್ (37) ಎಂಬುವರನ್ನು ಬಂಧಿಸಿ, ಬೈಕ್ ಹಾಗೂ ₹ 15 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಆರೋಪಿಗಳು ಇತ್ತೀಚೆಗೆ ಸಿಂಗಪುರ ಎಕ್ಸ್‌ಪ್ರೆಸ್ ಲೇಔಟ್‌ನಲ್ಲಿ ವಿಜಯಲಕ್ಷ್ಮಿ ಎಂಬುವರಿಂದ 30 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಹೋಗಿದ್ದರು’ ಎಂದು ಪೊಲೀಸರು ಹೇಳಿದ್ದಾರೆ.

ಅಲಿ, ಸೈಯದ್ ವಿರುದ್ಧ ಮುಂಬೈ, ಕೋಲ್ಕತ್ತ, ಬೆಂಗಳೂರಿನ ಹಲವು ಠಾಣೆಗಳಲ್ಲಿ ನೂರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಮುಂಬೈನಿಂದ ವಿಮಾನದಲ್ಲಿ ಬರುತ್ತಿದ್ದ ಆರೋಪಿಗಳು, ಇರಾನಿ ಸಮುದಾಯಕ್ಕೆ ಸೇರಿದ ಯಾವುದಾದರೊಂದು ಪ್ರಾರ್ಥನಾ ಮಂದಿರದಲ್ಲಿ ವಾಸ್ತವ್ಯ ಹೂಡುತ್ತಿದ್ದರು.

ಮರುದಿನ ಬೆಳಿಗ್ಗೆ 6ರಿಂದ 1 ಗಂಟೆ ವರೆಗೆ ಪ್ರತಿಷ್ಠಿತ ರಸ್ತೆಗಳಲ್ಲಿ ಸುತ್ತಾಡಿ ಒಂಟಿ ಮಹಿಳೆಯರಿಂದ ಸರಗಳನ್ನು ದೋಚುತ್ತಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ್ದ ಬೈಕನ್ನು ರೈಲ್ವೆ ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ನಿಲ್ಲಿಸಿ, ಅದೇ ದಿನ ಮುಂಬೈಗೆ ಬಸ್ ಹತ್ತುತ್ತಿದ್ದರು.

ವರ್ಷದ ಹಿಂದೆ ಮುಂಬೈ ಪೊಲೀಸರಿಗೆ ಸಿಕ್ಕಿಬಿದ್ದು ಜೈಲುಪಾಲಾಗಿದ್ದ ಆರೋಪಿಗಳು, ಆರು ತಿಂಗಳ ಹಿಂದೆ ಜಾಮೀನಿನ ಮೇಲೆ ಬಿಡುಗಡೆಯಾಗಿ ಕೃತ್ಯಮುಂದುವರಿಸಿದ್ದರು.

ಸಂಜಯನಗರ, ಆರ್‌.ಟಿ.ನಗರ, ಸದಾಶಿವನಗರ, ಅನ್ನಪೂರ್ಣೇಶ್ವರಿ ನಗರ, ರಾಮಮೂರ್ತಿ ನಗರ, ವಿದ್ಯಾರಣ್ಯಪುರ, ಬಾಣಸ
ವಾಡಿ, ಯಲಹಂಕ ಠಾಣಾ ವ್ಯಾಪ್ತಿಯಲ್ಲಿ 20 ಮಹಿಳೆಯರಿಂದ ಸರಗಳನ್ನು ಕಿತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !