ಮಂಗಳವಾರ, ಸೆಪ್ಟೆಂಬರ್ 17, 2019
21 °C
ಅಕ್ರಮ ಡಿ ನೋಟಿಫಿಕೇಷನ್ ಆರೋಪದ ಪ್ರಕರಣ

‘ಬಿ’ ರಿಪೋರ್ಟ್‌ಗೆ ತಕರಾರು

Published:
Updated:

ಬೆಂಗಳೂರು: ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ತನಿಖಾಧಿಕಾರಿಗಳು ಸಲ್ಲಿಸಿರುವ ‘ಬಿ‘ ರಿಪೋರ್ಟ್‌ಗೆ ಫಿರ್ಯಾದುದಾರರು ತಕರಾರು ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತಂತೆ ಫಿರ್ಯಾದುದಾರ ಎಂ.ಎಸ್.ಮಹದೇವಸ್ವಾಮಿ ಪರ ವಕೀಲರು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ಕ್ಕೆ ಶುಕ್ರವಾರ ಅರ್ಜಿ ಸಲ್ಲಿಸಿದರು. ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು, ವಿಚಾರಣೆಯನ್ನು ಜೂನ್ 7ಕ್ಕೆ ಮುಂದೂಡಿದ್ದಾರೆ.

‘ಕುಮಾರ ಸ್ವಾಮಿ ಅವರು ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಉತ್ತರಹಳ್ಳಿ ಹೋಬಳಿಯ ಹಲಗೆ ವಡೇರಹಳ್ಳಿ ಗ್ರಾಮದ ಸರ್ವೇ ನಂಬರ್‌ 128ರಲ್ಲಿ 1ಎಕರೆ 10 ಗುಂಟೆ ಮತ್ತು ಸರ್ವೇ ನಂಬರ್ 130ರಲ್ಲಿ 1ಎಕರೆ 14 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ್ದಾರೆ’ ಎಂದು ಆರೋಪಿಸಿ ಫಿರ್ಯಾದುದಾರರು ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ್ದರು.

ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು 2018 ಡಿಸೆಂಬರ್ 13 ರಂದು ವಿಚಾರಣಾ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ ಸಲ್ಲಿಸಿದ್ದರು.

Post Comments (+)