ಮಂಗಳವಾರ, ಸೆಪ್ಟೆಂಬರ್ 28, 2021
22 °C
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ

ಶಿಕ್ಷಕರ ಪರಿಶ್ರಮಕ್ಕೆ ಉತ್ತಮ ಫಲಿತಾಂಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ‘ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ತೆಗೆದುಕೊಂಡ ಕ್ರಮಗಳು ಫಲಪ್ರದವಾಗಿರುವುದು ಸಂತಸ ತಂದಿದೆ. ಈ ಫಲಿತಾಂಶವನ್ನು ಕಾಯ್ದುಕೊಂಡು ಮತ್ತಷ್ಟು ಉತ್ತಮಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್ ಹೇಳಿದರು.

ನಗರ ಹೊರವಲಯದ ಬಿಜಿಎಸ್ ಆಂಗ್ಲ ಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಕಳೆದ ವರ್ಷ 31ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ 20ನೇ ಸ್ಥಾನಕ್ಕೆ ಏರಿರುವುದರಿಂದ ಹಿಂದೆ ಶಿಕ್ಷಕರ ಅಪಾರ ಶ್ರಮವಿದೆ. ಈ ಹಿಂದೆ ಹಿಂದೆ ಉಡುಪಿ, ದಕ್ಷಿಣ ಕನ್ನಡ, ಮತ್ತು ಸಿರಸಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ರ್‍ಯಾಂಕ್‌ಗಳು ಇವತ್ತು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ವಿಸ್ತರಿಸಿರುವುದು ಖುಷಿಯ ವಿಚಾರ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಸಾಧನೆ ಮಾಡಿ ಒಳ್ಳೆಯ ವೃತ್ತಿಗಳನ್ನು ಪಡೆದು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಬಿಜಿಎಸ್ ಆಂಗ್ಲ ಶಾಲೆಯ ವಿದ್ಯಾರ್ಥಿ ಎನ್.ಚೌಡರೆಡ್ಡಿ, ದ್ವಿತೀಯ ಸ್ಥಾನ ಗಳಿಸಿದ ಬಿಜಿಎಸ್ ವಿದ್ಯಾನಿಕೇತನ ಮಂಚನಬಲೆ ಶಾಲೆಯ ವಿದ್ಯಾರ್ಥಿನಿಯರಾದ ಮುಬಾಶಿರ್ ಮತ್ತು ಕೀರ್ತನಾ, ತೃತೀಯ ಸ್ಥಾನ ಪಡೆದ ಎಸ್‌.ಪಿ.ಚೇತನ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶಾಂತಲಾ, ಶಾಲೆಯ ಮುಖ್ಯಶಿಕ್ಷಕ ಡಿ.ಸಿ.ಮೋಹನ್ ಕುಮಾರ್, ಬಿಜಿಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಎಚ್.ಬಿ.ರಮೇಶ್, ಬಿಜಿಎಸ್ ವಿದ್ಯಾನಿಕೇತನ ಮಂಚನಬಲೆ ಶಾಲೆಯ ಮುಖ್ಯಶಿಕ್ಷಕ ಜಿ.ವಿ.ಗಂಗಾಧರ್ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.