ಮಾಯಾ ಮೇಲೆ ಮೋದಿಗೆ ಮಮತೆ

ಗುರುವಾರ , ಮೇ 23, 2019
26 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

‘ಬೆಹೆನ್‌ಜೀ’ ಎಂದು ಸಂಬೋಧಿಸಿದ ಪ್ರಧಾನಿ

ಮಾಯಾ ಮೇಲೆ ಮೋದಿಗೆ ಮಮತೆ

Published:
Updated:
Prajavani

ಲಖನೌ: ಲೋಕಸಭಾ ಚುನಾವಣೆಯ ನಾಲ್ಕು ಹಂತಗಳ ಮತದಾನ ಮುಕ್ತಾಯವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಂತ್ರಗಾರಿಕೆಯನ್ನು ಬದಲಿಸಿಕೊಂಡಂತೆ ಕಾಣಿಸುತ್ತಿದೆ. ಬಿಎಸ್‌ಪಿ ನಾಯಕಿ ಮಾಯಾವತಿ ಅವರ ಬಗ್ಗೆ ಅವರು ಮೃದು ಧೋರಣೆ ತಳೆದಿದ್ದಾರೆ. 

ಉತ್ತರ ಪ್ರದೇಶದ ಪ್ರತಾಪಗಡದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಶನಿವಾರ ಮಾತನಾಡಿದ ಮೋದಿ, ಮಾಯಾವತಿ ಅವರನ್ನು ‘ಬೆಹನ್‌ಜೀ’ ಎಂದು ಸಂಬೋಧಿಸಿದರು. ‘ಸಮಾಜವಾದಿ ಪಕ್ಷ (ಎಸ್‌ಪಿ) ಹಾಗೂ ಕಾಂಗ್ರೆಸ್‌ನ ತಂತ್ರಗಾರಿಕೆಯಲ್ಲಿ ಮಾಯಾವತಿ ಸಿಲುಕಿಕೊಂಡಿದ್ದಾರೆ’ ಎಂದೂ ಹೇಳಿದ್ದಾರೆ. 

‘ಸಮಾಜವಾದಿ ಪಕ್ಷವು ಮಹಾಘಟಬಂಧನದ ಹೆಸರಿನಲ್ಲಿ ಮಾಯಾವತಿ ಅವರಿಂದ ಲಾಭ ಪಡೆದುಕೊಳ್ಳಲು ಮುಂದಾಗಿದೆ. ಅವರನ್ನು ಕತ್ತಲಲ್ಲಿ ಇರಿಸಲಾಗಿದೆ. ಅವರಿಗೆ ಪ್ರಧಾನಮಂತ್ರಿ ಹುದ್ದೆಯ ಆಸೆ ತೋರಿಸಲಾಗಿದೆ. ಈ ತಂತ್ರಗಾರಿಕೆಯನ್ನು ಮಾಯಾವತಿ ಅರ್ಥ ಮಾಡಿಕೊಳ್ಳಬೇಕು’ ಎಂದು ಮೋದಿ ಹೇಳಿದ್ದಾರೆ. 

‘ಮಾಯಾವತಿ ಅವರು ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿ ಟೀಕೆ ನಡೆಸುತ್ತಿದ್ದರೆ, ಸಮಾಜವಾದಿ ಪಕ್ಷವು ಕಾಂಗ್ರೆಸ್‌ ಬಗ್ಗೆ ಮೃದು ಧೋರಣೆ ತಳೆದಿದೆ. ಎಸ್‌ಪಿ ರ್‍ಯಾಲಿಯಲ್ಲಿ ಕಾಂಗ್ರೆಸ್ ಮುಖಂಡರು ವೇದಿಕೆ ಹಂಚಿಕೊಳ್ಳುತ್ತಿದ್ದಾರೆ’ ಎಂದು ಮೋದಿ ಹೇಳಿದ್ದಾರೆ.

ರಾಯ್‌ಬರೇಲಿ ಕ್ಷೇತ್ರದಲ್ಲಿ ಎಸ್‌ಪಿ ಶಾಸಕ ಮನೋಜ್‌ ಪಾಂಡೆ, ಸೋನಿಯಾ ಪರವಾಗಿ ಆಯೋಜಿಸಿದ್ದ ರ್‍ಯಾಲಿಯಲ್ಲಿ ಪ್ರಿಯಾಂಕಾ ಪಾಲ್ಗೊಂಡಿದ್ದನ್ನು ಮೋದಿ ಉಲ್ಲೇಖಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 2

  Happy
 • 1

  Amused
 • 1

  Sad
 • 1

  Frustrated
 • 0

  Angry

Comments:

0 comments

Write the first review for this !