ಶುಕ್ರವಾರ, ಸೆಪ್ಟೆಂಬರ್ 24, 2021
23 °C

ಯೆಚೂರಿ ವಿರುದ್ಧ ಯೋಗ ಗುರು ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಡೆಹ್ರಾಡೂನ್: ‘ಹಿಂದೂ ಧರ್ಮದಲ್ಲೇ ಹಿಂಸೆ ಇದೆ’ ಎಂಬ ಹೇಳಿಕೆ ನೀಡಿರುವ ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ವಿರುದ್ಧ ಯೋಗಗುರು ರಾಮ್‌ದೇವ್‌ ಅವರು ದೂರು ನೀಡಿದ್ದಾರೆ.

‘ಯೆಚೂರಿ ಅವರು ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ರಾಮ್‌ದೇವ್‌ ದೂರಿನಲ್ಲಿ ಒತ್ತಾಯಿಸಿದ್ದಾರೆ. ಆ ಬಗ್ಗೆ ಎಫ್‌ಐಆರ್‌ ದಾಖಲಿಸಲಾಗಿದ್ದು ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿಸಿದ ಅಧಿಕಾರಿಗೆ ಸೂಚಿಸಲಾಗಿದೆ’ ಎಂದು ಹರಿದ್ವಾರದ ಎಸ್‌ಎಸ್‌ಪಿ ಜನಮೇಜಯ ಖಂಡೂರಿ ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರ ಹೇಳಿಕೆಗಳನ್ನು ಉಲ್ಲೇಖಿಸಿದ್ದ ಯೆಚೂರಿ, ‘ರಾಮಾಯಣ, ಮಹಾಭಾರತ ಗ್ರಂಥಗಳಲ್ಲಿ ಹಿಂಸೆಯಿದೆ. ಹೀಗಿರುವಾಗ ಹಿಂದೂಗಳಿಗೆ ಹಿಂಸೆಯಲ್ಲಿ ವಿಶ್ವಾಸವಿಲ್ಲ ಎನ್ನಲು ಹೇಗೆ ಸಾಧ್ಯ’ ಎಂದಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು