ಬೆಂಗಳೂರು ವಿವಿ: ಅಂಬೇಡ್ಕರ್‌ ಜಯಂತಿ ಆಚರಣೆ

ಭಾನುವಾರ, ಮೇ 26, 2019
32 °C

ಬೆಂಗಳೂರು ವಿವಿ: ಅಂಬೇಡ್ಕರ್‌ ಜಯಂತಿ ಆಚರಣೆ

Published:
Updated:
Prajavani

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗಗಳ ವತಿಯಿಂದ ಕಾಲೇಜಿನಲ್ಲಿ 128ನೇ ಡಾ.ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆಯನ್ನು ಕಾಲೇಜಿನಲ್ಲಿ ಆಯೋಜಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಾಧ್ಯಾಪಕ ಡಾ.ಎಸ್‌.ಮಾದೇಶ್ವರನ್‌ ಮಾತನಾಡಿ, 'ದೇಶದಲ್ಲಿ ರಿಸರ್ವ್ ಬ್ಯಾಂಕ್‌ ಸ್ಥಾಪನೆ, ಉದ್ಯೋಗ ವಿನಿಮಯ ಕೇಂದ್ರ ಸ್ಥಾಪನೆ ಸಹಿತ ಹಲವಾರು ಜನಹಿತ ಕಾರ್ಯಗಳು ಅಂಬೇಡ್ಕರ್‌ ಚಿಂತನೆಯ ಫಲಗಳು ಎಂದರು.

ಬೆಂಗಳೂರು ವಿವಿ ಕುಲಸಚಿವ (ಮೌಲ್ಯಮಾಪನ) ಪ್ರೊ.ಸಿ.ಶಿವರಾಜು ಮುಖ್ಯ ಅತಿಥಿಯಾಗಿದ್ದರು. ಡಾ.ಅಂಬೇಡ್ಕರ್ ಅಧ್ಯಯನ ಕೇಂದ್ರ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಸಂಜೀವ್‍ರಾಜ್ ಮಾತನಾಡಿದರು. ಪ್ರಾಂಶುಪಾಲ ಪ್ರೊ.ವಿ.ಸುದೇಶ್, ಕಾನೂನು ವಿಭಾಗದ ಮುಖ್ಯಸ್ಥ ಪ್ರೊ.ಡಾ.ಎನ್.ದಶರಥ್ ಕಾರ್ಯಕ್ರಮ ಸಂಯೋಜಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !