ಶನಿವಾರ, ಸೆಪ್ಟೆಂಬರ್ 18, 2021
30 °C
ಮಹಿಳೆಯರ ರಕ್ಷಣೆಗೆ ವಿಶೇಷ ಕಾರ್ಯಾಚರಣೆ; 100ಕ್ಕೂ ಹೆಚ್ಚು ಮಂದಿ ವಶಕ್ಕೆ

100 ಪುಡಾರಿಗಳು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹಿಳೆಯರ ರಕ್ಷಣೆಗಾಗಿ ಶುಕ್ರವಾರ ವಿಶೇಷ ಕಾರ್ಯಾಚರಣೆ ನಡೆಸಿದ ಉತ್ತರ ವಿಭಾಗದ ಪೊಲೀಸರು, 100ಕ್ಕೂ ಹೆಚ್ಚು ಪುಡಾರಿಗಳನ್ನು ವಶಕ್ಕೆ ಪಡೆದರು. 

ಮೆಟ್ರೊ, ಬಸ್, ಆಟೊ ನಿಲ್ದಾಣ, ತಂಗುದಾಣ ಸಹಿತ ಸಾರ್ವಜನಿಕ ಸ್ಥಳಗ ಳಲ್ಲಿ ಪುಡಾರಿಗಳ ಕಾಟ ಹೆಚ್ಚಾಗಿದೆ. ಪುಡಾರಿಗಳ ಉಪಟಳಕ್ಕೆ ಕಡಿವಾಣ ಹಾಕಲು ಡಿಸಿಪಿ ಶಶಿಕುಮಾರ್ ಅವರಿಗೆ ಸಾರ್ವಜನಿಕರು ದೂರು ನೀಡಿದ್ದರು.

ದೂರಿನ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿದ ಡಿಸಿಪಿ ನೇತೃ ತ್ವದ ತಂಡ, ರಾತ್ರೋರಾತ್ರಿ ಪುಡಾರಿಗಳ ಹೆಡೆಮುರಿ ಕಟ್ಟಿ‘ರಸ್ತೆಯಲ್ಲಿ ನಿಂತು ಯುವತಿಯರನ್ನು ಚುಡಾಯಿಸುತ್ತಿದ್ದ, ವಾಹನಗಳನ್ನು ಅಡ್ಡಗಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಹಾಗೂ  ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ಬೈಯುತ್ತಿದ್ದ ಪುಡಾರಿಗಳ ಬಗ್ಗೆ ಮಾಹಿತಿ ಬಂದಿತ್ತು. ಕಾರ್ಯಾಚರಣೆ ನಡೆಸಿ 100ಕ್ಕೂ ಹೆಚ್ಚು ಪುಡಾರಿಗಳನ್ನು ವಶಕ್ಕೆ ಪಡೆಯಲಾಯಿತು’ ಎಂದು ಡಿಸಿಪಿ ಶಶಿಕುಮಾರ್ ತಿಳಿಸಿದರು.

‘ಪುಡಾರಿಗಳನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಯಿತು. ಅವರಲ್ಲಿ ಕೆಲವರು ರೌಡಿಗಳೂ ಇದ್ದಾರೆ. ಪೋಷಕ ರನ್ನು ಕರೆಸಿ ಬುದ್ದಿಹೇಳಿ, ಇನ್ನೊಮ್ಮೆ ಕೃತ್ಯ ಎಸಗದಂತೆ ಬರೆಸಿಕೊಂಡು ಕೆಲ ಯುವಕರನ್ನು ಬಿಟ್ಟು ಕಳುಹಿಸಲಾಗಿದೆ. ಈ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ’ ಎಂದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು