ಸೋಮವಾರ, ಮೇ 23, 2022
29 °C
’ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ’

ಕೇಂದ್ರ ಸಚಿವೆಯಾಗುವ ಸುಮಲತಾ: ಬಸವಾನಂದಸ್ವಾಮಿ ವಿಭೂತಿಮಠ ಭವಿಷ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‘ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಎ.ಸುಮಲತಾ ಪವಾಡಸದೃಶ ರೀತಿಯಲ್ಲಿ ಗೆಲುವು ಸಾಧಿಸಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಸಚಿವ ಸ್ಥಾನ ಅಲಂಕರಿಸಲಿದ್ದಾರೆ’ ಎಂದು ಬೀದರ್‌ ಜಿಲ್ಲೆ ಬಸವಕಲ್ಯಾಣದ ಬಸವಧರ್ಮ ಪ್ರಸಾರಕ ಬಸವಾನಂದಸ್ವಾಮಿ ವಿಭೂತಿಮಠ ಸೋಮವಾರ ಭವಿಷ್ಯ ನುಡಿದರು.

‘ಮಂಡ್ಯದಲ್ಲಿ ನಡೆದ ಚುನಾವಣೆ ಇಡೀ ದೇಶದ ಗಮನ ಸೆಳೆದಿದೆ. ಶೇ 80ಕ್ಕಿಂತಲೂ ಹೆಚ್ಚು ಮತದಾನವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಎಲ್ಲಾ ಪಕ್ಷಗಳು ಹಾಗೂ ಸಮುದಾಯದ ಜನರು ಸುಮಲತಾ ಅವರಿಗೆ ಬೆಂಬಲ ನೀಡಿದ್ದಾರೆ. ಸುಮಲತಾ ಪ್ರಬುದ್ಧ ಮಾತುಗಳಿಂದ ಜನರ ಮನಸೂರೆಗೊಂಡಿದ್ದಾರೆ. ಅವರಿಗೆ ಉತ್ತಮ ರಾಜಕೀಯ ಭವಿಷ್ಯವಿದೆ. ಮಾತೃಹೃದಯಿಯಾದ ಸುಮಲತಾ ಚುನಾವಣೆಯಲ್ಲಿ ಗೆಲ್ಲುವ ಜೊತೆಗೆ ಕೇಂದ್ರ ಸಚಿವೆಯಾಗುವುದು ನಿಶ್ಚಿತ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

‘ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿ’

‘ವಿಶ್ವದಲ್ಲಿ ಭಯೋತ್ಪಾದನೆ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ಮಟ್ಟ ಹಾಕಲು ನರೇಂದ್ರ ಮೋದಿ ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯಾಗುವ ಅವಶ್ಯಕತೆಯಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು