ಸರ್ವಾಂಗೀಣ ಅಭಿವೃದ್ಧಿಗೆ ಬೇಸಿಗೆ ಶಿಬಿರ

ಚಿಕ್ಕಬಳ್ಳಾಪುರ: ‘ಇಂದಿನ ಮಕ್ಕಳು ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸಿ ಮಾನಸಿಕ ಹಾಗು ದೈಹಿಕವಾಗಿ ಅಭಿವೃದ್ಧಿ ಆದಾಗ ಮಾತ್ರ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ’ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲತಾ ಹೇಳಿದರು.
ಬಾಲ ಭವನ ಸೊಸೈಟಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಬೀಡಗಾನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಚಿಕ್ಕಬಳ್ಳಾಪುರ ತಾಲ್ಲೂಕು ಮಟ್ಟದ ಉಚಿತ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
‘ಶಿಬಿರದಲ್ಲಿ ಯೋಗ, ಕರಾಟೆ, ನೃತ್ಯ, ಚಿತ್ರಕಲೆ, ಕರಕುಶಲ, ಹಾಗೂ ಜೇಡಿ ಮಣ್ಣಿನ ಕಲೆಗೆ ಸಂಬಂಧಿಸಿದಂತೆ ಸುಮಾರು 12 ದಿನಗಳ ಕಾಲ ಉಚಿತವಾಗಿ ತರಬೇತಿಯನ್ನು ನೀಡಲಾಗುವುದು. 5 ರಿಂದ 16 ವರ್ಷದ ಒಳಗಿನ ಮಕ್ಕಳು ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು’ ಎಂದು ತಿಳಿಸಿದರು.
ಶಿಶು ಸಂರಕ್ಷಣಾಧಿಕಾರಿ ನವತಾಜ್, ಶಾಲೆಯ ಮುಖ್ಯ ಶಿಕ್ಷಕಮಂಜುನಾಥ್, ಎಸ್.ಡಿ.ಎಂ.ಸಿ ಅಧ್ಯಕ್ಷ ರಮೇಶ, ಸದಸ್ಯರು, ಹಾಗೂ ಸಂಪನ್ಮೂಲ ಶಿಕ್ಷಕರು ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.