ಸಿಬಿಎಸ್‌ಸಿ : ಹುಳಿಯಾರು: ವಿದ್ಯಾವಾರಿಧಿ ಶಾಲೆಗೆ ಶೇ 100ರಷ್ಟು ಫಲಿತಾಂಶ

ಶುಕ್ರವಾರ, ಮೇ 24, 2019
23 °C

ಸಿಬಿಎಸ್‌ಸಿ : ಹುಳಿಯಾರು: ವಿದ್ಯಾವಾರಿಧಿ ಶಾಲೆಗೆ ಶೇ 100ರಷ್ಟು ಫಲಿತಾಂಶ

Published:
Updated:
Prajavani

ಹುಳಿಯಾರು: ಪಟ್ಟಣದ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಗೆ 10ನೇ ತರಗತಿ ಸಿಬಿಎಸ್‌ಸಿ ಪಠ್ಯಕ್ರಮದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶೇ 100ರಷ್ಟು ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಹಾಜರಾಗಿದ್ದ 47 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಉತ್ತಮ ಸಾಧನೆ ಮಾಡಿದ್ದಾರೆ. ಡಿ.ಯಶಸ್ 500ಕ್ಕೆ 498 ಅಂಕ ಗಳಿಸುವ ಮೂಲಕ ಚನ್ನೈ ದಕ್ಷಿಣ ವಲಯಕ್ಕೆ ಹಾಗೂ ರಾಜ್ಯಕ್ಕೆ ಪ್ರಥಮರಾಗಿ ಹೊರಹೊಮ್ಮಿದ್ದಾರೆ.

ಉಳಿದಂತೆ 11 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 31 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 4 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, ಒಬ್ಬರು ತೃತೀಯ ಸ್ಥಾನದಲ್ಲಿ ಉತ್ತೀರ್ಣರಾಗಿದ್ದಾರೆ. ‌

ರಾಜ್ಯ ಮಟ್ಟದ ಸಾಧನೆಯ ಯಶಸ್ ಹಾಗೂ ಶಾಲೆಗೆ ಶೇ 100ರಷ್ಟು ಫಲಿತಾಂಶಕ್ಕೆ ಕಾರಣರಾದ ವಿದ್ಯಾರ್ಥಿಗಳನ್ನು ಶಾಲೆಯ ಅಧ್ಯಕ್ಷ ಕೆ.ಎಸ್.ಕಿರಣ್ ಕುಮಾರ್, ಕಾರ್ಯದರ್ಶಿ ಕವಿತಾ, ಶಾಲಾ ಶಿಕ್ಷಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !