ಸರಳವಾಗಿ ಬಸವ ಜಯಂತಿ ಆಚರಣೆ

ಮಂಗಳವಾರ, ಮೇ 21, 2019
32 °C

ಸರಳವಾಗಿ ಬಸವ ಜಯಂತಿ ಆಚರಣೆ

Published:
Updated:
Prajavani

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘಗಳ ಜಂಟಿ ಸಹಭಾಗಿತ್ವದಲ್ಲಿ ನಗರದ ತುಳು ಭವನದಲ್ಲಿ ಮಂಗಳವಾರ ಬಸವಣ್ಣನವರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ಲೋಕಸಭಾ ಚುನಾವಣೆಯ ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಬಸವಣ್ಣನನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಕೆ ಮತ್ತು ದೀಪ ಪ್ರಜ್ವಲನದೊಂದಿಗೆ ಉದ್ಘಾಟನೆಗೆ ಕಾರ್ಯಕ್ರಮವನ್ನು ಸೀಮಿತಗೊಳಿಸಲಾಯಿತು. ಭಾಷಣ, ಉಪನ್ಯಾಸಗಳಿಗೆ ಅವಕಾಶವಿರಲಿಲ್ಲ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್‌ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಹೇಶ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್‌, ಕರಾವಳಿ ವೀರಶೈವ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಎಚ್‌.ಎಸ್‌.ಗುರುಮೂರ್ತಿ, ಕಾರ್ಯದರ್ಶಿ ವಿವೇಕ್‌ ಶೆಟ್ಟರ್‌, ಮುಖಂಡರಾದ ಆರ್‌.ಎಂ.ಬಸವರಾಜ್‌, ರಾಜೇಂದ್ರಪ್ಪ, ಧಾರವಾಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರೊ.ಲಿಂಗರಾಜ ಅಂಗಡಿ, ಪಿ.ಎಸ್‌.ಕೌಜಲಗಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪ್ರದೀಪ್‌ಕುಮಾರ್‌ ಕಲ್ಕೂರ ಉಪಸ್ಥಿತರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !