ಶನಿವಾರ, ಸೆಪ್ಟೆಂಬರ್ 25, 2021
26 °C

ಕುತೂಹಲ ಮೂಡಿಸಿದ ವಿಶ್ವನಾಥ್‌–ಪ್ರಸಾದ್‌ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ವಿಶ್ವನಾಥ್‌ ಅವರು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್‌ ಅವರನ್ನು ಮಂಗಳವಾರ ಸಂಜೆ ಭೇಟಿಯಾಗಿ ಚರ್ಚಿಸಿರುವುದು ಕುತೂಹಲ ಮೂಡಿಸಿದೆ.

ಜಯಲಕ್ಷ್ಮಿಪುರಂನಲ್ಲಿರುವ ಪ್ರಸಾದ್‌ ಅವರ ನಿವಾಸಕ್ಕೆ ಭೇಟಿ ನೀಡಿದ್ದ ವಿಶ್ವನಾಥ್‌, ಸುಮಾರು ಎರಡು ತಾಸು ಗೋಪ್ಯವಾಗಿ ಸಮಾಲೋಚನೆ ನಡೆಸಿದ್ದರು.

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯಬಹುದಾದ ಬೆಳವಣಿಗೆಗಳ ಬಗ್ಗೆ ಉಭಯ ಮುಖಂಡರು ಚರ್ಚಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರಸಾದ್‌, ‘ನಾನು ಹಾಗೂ ವಿಶ್ವನಾಥ್ ಸ್ನೇಹಿತರು. ಆರೋಗ್ಯ ವಿಚಾರಿಸಲು ಅವರು ನನ್ನ ನಿವಾಸಕ್ಕೆ ಬಂದಿದ್ದರು. ಲೋಕಸಭೆ ಚುನಾವಣೆಯ ಕಾರಣವಾಗಿ ನಾವಿಬ್ಬರೂ ಭೇಟಿಯಾಗಿರಲಿಲ್ಲ. ಬೇರೆ ಬೇರೆ ಪಕ್ಷದಲ್ಲಿದ್ದರೂ ನಮ್ಮ ವಿಶ್ವಾಸಕ್ಕೆ ಧಕ್ಕೆ ಆಗಿಲ್ಲ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು