ಶುಕ್ರವಾರ, ಸೆಪ್ಟೆಂಬರ್ 24, 2021
27 °C
ತಾಲ್ಲೂಕಿನ ಅಂಗರೇಖನಹಳ್ಳಿಯಲ್ಲಿ ಘಟನೆ, 7 ಜನರ ಬಂಧನ, ಆರೋಪಿಗಳಿಗೆ ನ್ಯಾಯಾಂಗ ಬಂಧನ

ಜೂಜುಕೋರರಿಂದ ಪೊಲೀಸರ ಮೇಲೆ ಹಲ್ಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅಂಗರೇಖನಹಳ್ಳಿಯಲ್ಲಿ ಗುರುವಾರ ಜೂಜುಕೋರರ ತಂಡವೊಂದು ದಾಳಿಗೆ ಮುಂದಾದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿದ್ದಾರೆ.

ಗ್ರಾಮಾಂತರ ಠಾಣೆ ಎಸ್‌ಐ ಚೇತನ್ ಅವರ ನೇತೃತ್ವದ ತಂಡದ ಪೊಲೀಸರು ಅಂಗರೇಖನಹಳ್ಳಿಯಲ್ಲಿ ಜೂಜಾಡುತ್ತಿದ್ದವರನ್ನು ಬಂಧಿಸಲು ಮುಂದಾದಾಗ ಜೂಜಾಟದಲ್ಲಿ ನಿರತರಾಗಿದ್ದವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ, ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಕಾನ್‌ಸ್ಟೆಬಲ್‌ಗಳಾದ ಸೋಮಶೇಖರ್, ಮುತ್ತಪ್ಪ ನಿಂಗ್ರಿ ಅವರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೂಜಾಟದ ಸ್ಥಳದಲ್ಲಿ ₹1,510 ವಶಪಡಿಸಿಕೊಂಡ ಪೊಲೀಸರು, ಮಾಧವ (35), ವೇಣುಗೋಪಾಲ್ (30), ಅಂಬರೀಶ್ (25), ಶ್ರೀನಿವಾಸ್ (36), ಮಹೇಂದ್ರ (23), ಮುನೇಗೌಡ (26) ಮತ್ತು ಸೋಮಶೇಖರ್ (35) ಎಂಬುವರನ್ನು ಬಂಧಿಸಿದ್ದು, ಪರಾರಿಯಾಗಿರುವ ಇನ್ನು ಕೆಲವರ ಬಂಧನಕ್ಕೆ ಜಾಲ ಬೀಸಿದ್ದಾರೆ.

ಗ್ರಾಮಾಂತರ ಠಾಣೆ ಪೊಲೀಸರು ಬಂಧಿತರ ವಿರುದ್ಧ, ಜೂಜಾಟ ಮತ್ತು ಐಪಿಸಿ ಸೆಕ್ಷನ್ 353 (ಸರ್ಕಾರಿ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ), 307 (ಕೊಲೆಗೆ ಯತ್ನ) ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.