ಮಂಗಳವಾರ, ಸೆಪ್ಟೆಂಬರ್ 28, 2021
22 °C

ಹೇಮರಡ್ಡಿ ಮಲ್ಲಮ್ಮ ಜಯಂತಿ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಶುಕ್ರವಾರ ನಡೆಯಿತು.

ಉಪತಹಶೀಲ್ದಾರ್ ಸುರೇಶ್ ಮಾತನಾಡಿ, ಶ್ರೀಶೈಲ ಮಲ್ಲಿಕಾರ್ಜುನನ್ನು ತನ್ನ ಆರಾಧ್ಯ ದೈವವಾಗಿ ಆರಾಧಿಸಿದ ಮಲ್ಲಮ್ಮ, ಮೋಕ್ಷ ಪಡೆಯಲು ಲೌಕಿಕ ಪ್ರಪಂಚ ತ್ಯಾಗ ಮಾಡದೆ ಸಂಸಾರದಲ್ಲಿದ್ದುಕೊಂಡು ಸದ್ಗತಿ ಪಡೆದ ಮಹಾನ್‌ ಸಾಧಕಿ. ಅವರ ಬದುಕು ಬೃಹತ್ ವಚನ ಸಂಪುಟದಂತಿದೆ. ಅವರ ಜೀವನ ಮೌಲ್ಯಗಳು ಮನುಕುಲಕ್ಕೆ ಕಾಣಿಕೆಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಕಸಬಾ ರಾಜಸ್ವ ನಿರೀಕ್ಷಕ ಎನ್.ಲಕ್ಷ್ಮೀನರಸಿಂಹಯ್ಯ, ತಾಲ್ಲೂಕು ಕಲಾವಿದರ ಸಂಘದ ಅಧ್ಯಕ್ಷ ಎನ್.ರಾಮಾಂಜಿನಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು