ಶನಿವಾರ, ಸೆಪ್ಟೆಂಬರ್ 21, 2019
24 °C

ಒಳಿತನ್ನು ಬಯಸಿದ ಮಹಾಸಾಧ್ವಿ ಮಲ್ಲಮ್ಮ

Published:
Updated:
Prajavani

ಚಿಕ್ಕಬಳ್ಳಾಪುರ: ‘ತನ್ನ ಕಷ್ಟದಲ್ಲೂ ಇತರರ ಒಳಿತನ್ನೇ ಬಯಸಿದ ಮಹಾಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಆದರ್ಶ ಎಲ್ಲಾ ಮಹಿಳೆಯರಿಗೆ ಮಾದರಿಯಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ಉಪನಿರ್ದೇಶಕ ಬಿ.ಎಸ್. ವೆಂಕಟಾಚಲಪತಿ ಹೇಳಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶುಕ್ರವಾರ ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಸಾಂಕೇತಿಕವಾಗಿ ಆಚರಿಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಲ್ಲಿಕಾರ್ಜುನಸ್ವಾಮಿ ತನ್ನ ತಂದೆ ಎಂದು ನಂಬಿ ಆಧ್ಯಾತ್ಮಿಕ ಸಾಧನೆ ಮಾಡಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರು 14ನೇ ಶತಮಾನದಲ್ಲಿ ದಾಸೋಹವನ್ನು ಜಾರಿಗೆ ತಂದರು. ಇವತ್ತಿನ ಮಹಿಳೆಯರು ಮಲ್ಲಮ್ಮನವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ’ ಎಂದು ತಿಳಿಸಿದರು. ಉಪ ತಹಶೀಲ್ದಾರ್ ತುಳಸಿ, ಕಂದಾಯ ನಿರೀಕ್ಷಕ ಹನುಮೇಗೌಡ ಉಪಸ್ಥಿತರಿದ್ದರು.

Post Comments (+)