ಮಂಗಳವಾರ, ಸೆಪ್ಟೆಂಬರ್ 28, 2021
22 °C

ಬೈಕ್‌ ಅಪಘಾತ: ಯುವಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಗಳೂರು: ಚಾರಣಕ್ಕೆಂದು ಹಾಸನದಿಂದ ಉಡುಪಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕರೊಬ್ಬರು ಶುಕ್ರವಾರ ನಸುಕಿನ ಜಾವ ಇಲ್ಲಿನ ಸುರತ್ಕಲ್‌ ಟೋಲ್‌ ಗೇಟ್‌ ಬಳಿ ರಸ್ತೆಯುಬ್ಬು ಕಾಣದೇ ನಿಯಂತ್ರಣ ಕಳೆದುಕೊಂಡು ತಡೆಗೋಡೆಗೆ ಡಿಕ್ಕಿಹೊಡೆದು ಮೃತಪಟ್ಟಿದ್ದಾರೆ.

ಹಾಸನ ನಗರದ ನಿವಾಸಿ ಶರತ್‌ ಗೌಡ (25) ಮೃತ ಯುವಕ. ಚಾರಣದಲ್ಲಿ ಆಸಕ್ತಿ ಹೊಂದಿದ್ದ ಶರತ್‌, ನಿಖಿಲ್‌ ಜಿ.ಪಿ ಮತ್ತು ಅವಿನಾಶ್‌ ಎಂಬುವವರು ಮೂರು ಪ್ರತ್ಯೇಕ ಬೈಕ್‌ಗಳಲ್ಲಿ ಗುರುವಾರ ರಾತ್ರಿ ಹಾಸನದಿಂದ ಹೊರಟಿದ್ದರು. ಶುಕ್ರವಾರ ಬೆಳಗ್ಗಿನ ಜಾವ 4.25ರ ಸುಮಾರಿಗೆ ಸುರತ್ಕಲ್‌ ಟೋಲ್‌ ಗೇಟ್‌ ತಲುಪಿದ್ದರು. ಟೋಲ್‌ ಗೇಟ್‌ ಬಳಿ ರಸ್ತೆಯುಬ್ಬು ಗಮನಿಸದೇ ವೇಗವಾಗಿ ಬೈಕ್‌ ಚಲಾಯಿಸಿದ್ದು, ನಿಯಂತ್ರಣ ಕಳೆದುಕೊಂಡು ಎಡಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಶರತ್‌ ಗೌಡ ತಲೆಗೆ ತೀವ್ರವಾಗಿ ಪೆಟ್ಟಾಗಿತ್ತು. ತಕ್ಷಣವೇ ಅವರನ್ನು ಮುಕ್ಕದ ಶ್ರೀನಿವಾಸ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದರು.

ಮಂಗಳೂರು ಉತ್ತರ (ಸುರತ್ಕಲ್‌) ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನ ಕುಟುಂಬದವರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ.

ಕತ್ತಲಿನಿಂದ ಅಪಘಾತ?: ಟೋಲ್‍ಗೇಟ್ ಬಳಿ ಬೀದಿ ದೀಪ ಇಲ್ಲ. ಟೋಲ್‌ ಗೇಟ್‌ ನಿರ್ವಾಹಕರೂ ಸರಿಯಾದ ಬೆಳಕಿನ ವ್ಯವಸ್ಥೆ ಮಾಡಿಲ್ಲ. ಇದರಿಂದಾಗಿಯೇ ಬೈಕ್‌ ಸವಾರನಿಗೆ ರಸ್ತೆಯುಬ್ಬು ಕಾಣಿಸಿಲ್ಲ. ವೇಗವಾಗಿ ಬಂದ ಬೈಕ್ ಸವಾರನ ನಿಯಂತ್ರಣ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು