ಇಬ್ಬರು ಸರಗಳ್ಳರ ಬಂಧನ

ಸೋಮವಾರ, ಮೇ 20, 2019
30 °C

ಇಬ್ಬರು ಸರಗಳ್ಳರ ಬಂಧನ

Published:
Updated:

ಮಂಗಳೂರು: ಏಪ್ರಿಲ್‌ 22ರಂದು ನಾಗುರಿಯ ಆಂಜೆಲೋರ್‌ ಚರ್ಚ್‌ ಬಳಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿ ಬಂದು ದಾರಿ ಕೇಳುವ ನೆಪದಲ್ಲಿ ಮಾತನಾಡಿಸಿ ಚಿನ್ನದ ಕರಿಮಣಿ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

‘ನಗರದ ಕುಲಶೇಖರ ಸಮೀಪದ ಅಳಪೆ ನಿಡ್ಡೆಲ್‌ ಗೋಕರ್ಣ ನಿವಾಸಿಗಳಾದ ಹರ್ಷಿತ್‌ ಶೆಟ್ಟಿ ಅಲಿಯಾಸ್‌ ಹರ್ಷಿತ್‌ (25) ಮತ್ತು ಹವಿತ್‌ ಪೂಜಾರಿ (24) ಬಂಧಿತರು. ಆರೋಪಿಗಳಿಂದ ಮಹಿಳೆಯಿಂದ ದೋಚಿದ್ದ ₹ 50,000 ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ₹ 60,000 ಮೌಲ್ಯದ ಬೈಕ್‌ ವಶಪಡಿಸಿಕೊಳ್ಳಲಾಗಿದೆ’ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಆರೋಪಿಗಳು ಪಡೀಲ್ ಜಂಕ್ಷನ್‌ ಬಳಿ ಇರುವ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹರ್ಷಿತ್ ಶೆಟ್ಟಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ನಿಯಂತ್ರಣ ಕಾಯ್ದೆ ಹಾಗೂ ದರೋಡೆಗೆ ಯತ್ನ ಪ್ರಕರಣ, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ನಿಯಂತ್ರಣ ಕಾಯ್ದೆ ಪ್ರಕರಣ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣಗಳಿವೆ. ಹವಿತ್ ಪೂಜಾರಿ ವಿರುದ್ದ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣಗಳಿವೆ ಎಂದು ಕಮಿಷನರ್‌ ತಿಳಿಸಿದ್ದಾರೆ.

ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಜಗದೀಶ್ ಆರ್., ಸಬ್‌ ಇನ್‌ಸ್ಪೆಕ್ಟರ್‌ ಪ್ರದೀಪ್ ಟಿ.ಆರ್., ಪ್ರೊಬೇಷನರಿ ಸಬ್‌ ಇನ್‌ಸ್ಪೆಕ್ಟರ್‌ ಸುದೀಪ್ ಹಾಗೂ ಕಾನ್‌ಸ್ಟೆಬಲ್‌ಗಳಾದ ಸಂತೋಷ್, ಮದನ್, ವಿನೋದ್, ರಾಜೇಶ್, ಸತೀಶ್, ನೂತನ್, ಸಂದೀಪ್, ಭರಣಿ ದೀಕ್ಷಿತ್, ಕಾರ್ತಿಕ್, ಜೀವನ್ ಮತ್ತು ಮೇಘರಾಜ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !