ಮೆಟ್ರೊ ನಿಲ್ದಾಣಕ್ಕೆ ಬಂದು ಹೋಗಿದ್ದು ‘ಹಜ್ ಯಾತ್ರಿಕ’

ಭಾನುವಾರ, ಮೇ 19, 2019
32 °C
ಸಿ.ಸಿ.ಟಿ.ವಿ ದೃಶ್ಯ ಕೊಟ್ಟವರ ವಿರುದ್ಧ ಕ್ರಮ: ಕಮಿಷನರ್

ಮೆಟ್ರೊ ನಿಲ್ದಾಣಕ್ಕೆ ಬಂದು ಹೋಗಿದ್ದು ‘ಹಜ್ ಯಾತ್ರಿಕ’

Published:
Updated:

ಬೆಂಗಳೂರು: ಮೆಜೆಸ್ಟಿಕ್‌ನ ಮೆಟ್ರೊ ನಿಲ್ದಾಣಕ್ಕೆ ಮೇ 6ರಂದು ಸಂಜೆ ಬಂದು ಹೋಗಿದ್ದ ಶಂಕಿತ ವ್ಯಕ್ತಿ, ’ಹಜ್ ಯಾತ್ರಿಕ’ ಎಂಬುದನ್ನು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಶಂಕಿತನ ಪತ್ತೆಗೆ ಶೋಧ ನಡೆಸುತ್ತಿದ್ದ ಪೊಲೀಸರು, ಆತನ ಫೋಟೊವನ್ನು ಶುಕ್ರವಾರ ಬಿಡುಗಡೆ ಮಾಡಿ ಸಾರ್ವಜನಿಕರ ಮೊರೆ ಹೋಗಿದ್ದರು. ಫೋಟೊದಲ್ಲಿದ್ದ ವ್ಯಕ್ತಿಯನ್ನು ಗುರುತಿಸಿದ್ದ ನಗರದ ನಿವಾಸಿಯೊಬ್ಬರು ನೀಡಿದ್ದ ಸುಳಿವಿನ ಮೇರೆಗೆ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಮೆಟ್ರೊ ನಿಲ್ದಾಣದಲ್ಲಿ ಅನುಮಾನಾಸ್ಪದ ನಡೆ– ಆತ್ಮಾಹುತಿ ಬಾಂಬರ್‌ ಶಂಕೆ?

‘ಆರ್.ಟಿ.ನಗರದಲ್ಲಿ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆಯಲಾಗಿದೆ. ‘ನಾನೊಬ್ಬ ಧರ್ಮ ಪ್ರಚಾರಕ. ಹಜ್ ಯಾತ್ರಿಕನಾಗಿ ನಗರಕ್ಕೆ ಬಂದಿದ್ದೇನೆ’ ಎಂದು ಆತ ಹೇಳುತ್ತಿದ್ದಾನೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ವಿಡಿಯೊ ಕೊಟ್ಟವರ ವಿರುದ್ಧ ಕ್ರಮ: ಮೆಟ್ರೊ ನಿಲ್ದಾಣಕ್ಕೆ ಬಂದು ಹೋದ ಅನುಮಾನಾಸ್ಪದ ವ್ಯಕ್ತಿಯ ಸಿ.ಸಿ.ಟಿ.ವಿ ಕ್ಯಾಮೆರಾದ ದೃಶ್ಯಾವಳಿ ಸೋರಿಕೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ಮುಂದಾಗಿದ್ದಾರೆ.

ಇದನ್ನೂ ಓದಿ: ‘ಗಡ್ಡ ಬಿಟ್ಟು, ಜುಬ್ಬಾ–ಪೈಜಾಮ ಧರಿಸಿದವರೆಲ್ಲ ಉಗ್ರರಾ?’

ಪ್ರಜಾವಾಣಿ’ ಜತೆ ಮಾತನಾಡಿದ ಸುನೀಲ್ ಕುಮಾರ್ , ‘‌ನಿಲ್ದಾಣಕ್ಕೆ ಬಂದಿದ್ದ ವ್ಯಕ್ತಿ, ತಪಾಸಣೆಗೆ ಸ್ಪಂದಿಸದೆ ಹೊರಟು ಹೋಗಿದ್ದಾನೆ. ಇದಾದ ಸ್ವಲ್ಪ ಸಮಯದಲ್ಲೇ ಆ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಹರಿದಾಡಿವೆ. ಅದನ್ನು ನೋಡಿ ನಾಗರಿಕರು ಆತಂಕಕ್ಕೆ ಒಳಗಾಗಿದ್ದಾರೆ. ಹೀಗಾಗಿ, ದೃಶ್ಯಾವಳಿ ಕೊಟ್ಟವರು ಯಾರು ಎಂಬ ಬಗ್ಗೆ ಪರಿಶೀಲನೆ ನಡೆಸಿ ವರದಿ ಕೊಡುವಂತೆ ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್‌ಗೆ ಸೂಚಿಸಿದ್ದೇನೆ’ ಎಂದರು.

ಇದನ್ನೂ ಓದಿ: ಬೆಂಗಳೂರು ಮೆಟ್ರೊ ನಿಲ್ದಾಣದಲ್ಲಿ ಅನುಮಾನಾಸ್ಪದ ನಡೆ– ಆತ್ಮಾಹುತಿ ಬಾಂಬರ್‌ ಶಂಕೆ?

‘ಕರ್ನಾಟಕ ಪಬ್ಲಿಕ್ ಸೇಫ್ಟಿ ಆ್ಯಕ್ಟ್’ ಪ್ರಕಾರ ಪ್ರತಿ ದಿನ 500 ಜನ ಬಂದು ಹೋಗುವ ಸ್ಥಳದಲ್ಲಿ ಸಿ.ಸಿ ಟಿ.ವಿ ಕ್ಯಾಮೆರಾ ಹಾಕಲೇಬೇಕು. ಇಂತಹ ಸ್ಥಳಗಳನ್ನು ‍ಪ್ರತಿ ಠಾಣೆಯ ಸಿಬ್ಬಂದಿ ಗುರುತಿಸುತ್ತಿದ್ದಾರೆ ಎಂದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 2

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !