ಶನಿವಾರ, ಸೆಪ್ಟೆಂಬರ್ 25, 2021
24 °C
ರಾಜರಾಜೇಶ್ವರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಮೇಳ

ದಕ್ಕಿತು 400 ಮಂದಿಗೆ ಉದ್ಯೋಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆಂಗೇರಿ: ರಾಜರಾಜೇಶ್ವರಿ ಎಂಜಿನಿಯರಿಂಗ್‌ ಕಾಲೇಜು ಶುಕ್ರವಾರ ಉದ್ಯೋಗ ಮೇಳ ಆಯೋಜಿಸಿತ್ತು.

ಈ ಮೇಳಕ್ಕೆ ಹೈರ್‌ ಮಿ ಮತ್ತು ಸೋನಾಯುಕ್ತಿ ಸಂಸ್ಥೆಗಳು ಸಹಕಾರ ನೀಡಿದ್ದವು. ಇದರಲ್ಲಿ ಬಿ.ಇ., ಎಂ.ಬಿ.ಎ. ಪದವಿ ಗಳಿಸಿದ ನೂರಾರು ಅಭ್ಯರ್ಥಿಗಳು ಪಾಲ್ಗೊಂಡಿದ್ದರು.

ಪ್ರತಿಭಾನ್ವಿತ ಅಭ್ಯರ್ಥಿಗಳ ಆಯ್ಕೆಗಾಗಿ 50ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಿದ್ದವು. ಸಂದರ್ಶನದ ಬಳಿಕ ನೇಮಕಾತಿ ಪತ್ರಗಳನ್ನು ಪಡೆದ ಅಭ್ಯರ್ಥಿಗಳ ಮೊಗದಲ್ಲಿ ಸಂತಸವಿತ್ತು. 

ಉದ್ಯೋಗ ಮೇಳ ಉದ್ಘಾಟಿಸಿದ ರಾಮನಗರ ಜಿಲ್ಲಾಧಿಕಾರಿ ಕೆ.ರಾಜೇಂದ್ರ, ‘ಸಕಾರಾತ್ಮಕ ಮನೋಭಾವ ಸಮಸ್ಯೆಯ ತೀವ್ರತೆಯನ್ನು ತಗ್ಗಿಸುತ್ತದೆ. ಗೆಲುವಿಗೆ ದಾರಿ ತೋರುತ್ತದೆ. ವಿದ್ಯಾರ್ಥಿಗಳು ಇಂತಹ ಮನಃಸ್ಥಿತಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ರಾಜರಾಜೇಶ್ವರಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಎ.ಸಿ.ಷಣ್ಮುಗಂ,‘ಉದ್ಯೋಗ ಗಳಿಕೆ ಜೀವನದ ಅತ್ಯಂತ ಪ್ರಮುಖ ಘಟ್ಟ. ಉದ್ಯೋಗ ಗಳಿಸಿದವರು ಇತರರಿಗೂ ಉದ್ಯೋಗ ನೀಡುವ ಮಟ್ಟಕ್ಕೆ ಬೆಳೆಯಬೇಕು. ಆ ಮೂಲಕ ಶಿಕ್ಷಣ ಸಂಸ್ಥೆಯ ಗೌರವ ಹೆಚ್ಚಿಸುವ ಕೆಲಸ ಮಾಡಬೇಕು’ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. 

‘ಮುಂದಿನ ವರ್ಷದಿಂದ ಉದ್ಯೋಗ ಮೇಳವನ್ನು ಇನ್ನು ಹತ್ತು ಹಲವಾರು ಸಂಸ್ಥೆಗಳ ನೆರವಿನೊಂದಿಗೆ ಆಯೋಜಿಸಲಾಗುವುದು. ಸಂಸ್ಥೆಯ ಹಾಗೂ ರಾಜ್ಯದ ಇತರೆ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ ವಹಿಸುತ್ತೇವೆ’ ಎಂದು ಪ್ರಾಂಶುಪಾಲ ಬಾಲಕೃಷ್ಣ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.