ಯುವಜನರಿಗೆ ಭಗೀರಥ ಮಾದರಿಯಾಗಲಿ

ಶನಿವಾರ, ಮೇ 25, 2019
32 °C
ತಾಲ್ಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಭಗೀರಥ ಮಹರ್ಷಿ ಜಯಂತಿ ಆಚರಣೆ

ಯುವಜನರಿಗೆ ಭಗೀರಥ ಮಾದರಿಯಾಗಲಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಒಂಟಿ ಕಾಲಿನಲ್ಲಿ ನಿಂತು ತಪಸ್ಸು ಮಾಡಿ ಶಿವನ ಮುಡಿಯಿಂದ ಗಂಗೆಯನ್ನು ಧರೆಗಿಳಿಸಿದ ಭಗೀರಥ ಮಹರ್ಷಿಯ ಛಲ ಇಂದಿನ ಯುವಜನರಿಗೆ ಮಾದರಿಯಾಗಬೇಕು’ ಎಂದು ತಹಶೀಲ್ದಾರ್ ಕೆ.ನರಸಿಂಹಮೂರ್ತಿ ಹೇಳಿದರು.

ಚುನಾವಣಾ ಮಾದರಿ ನೀತಿ ಸಂಹಿತೆ ಕಾರಣಕ್ಕೆ ಶನಿವಾರ ನಗರದ ತಾಲ್ಲೂಕು ಕಚೇರಿಯಲ್ಲಿ ಸಾಂಕೇತಿಕವಾಗಿ ಆಚರಿಸಿದ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಭೂಮಿಗೆ ನೀರು ತರುವ ನಿಟ್ಟಿನಲ್ಲಿ ಭಗೀರಥ ಮಹರ್ಷಿ ತೋರಿದ ಬದ್ಧತೆಯಿಂದಾಗಿ ನಾವು ಅವರನ್ನು ಇಂದಿಗೂ ಸ್ಮರಿಸುತ್ತೇವೆ. ಜೀವನದಲ್ಲಿ ಯಾವುದೇ ಕಷ್ಟಕರ ಸಾಧನೆಯನ್ನು ಮಾಡಬೇಕೆಂದರೆ ಭಗೀರಥ ಪ್ರಯತ್ನ ಮಾಡಬೇಕು ಎಂದು ಹೇಳುವುದು ಛಲದಿಂದ ಏನಾದರೂ ಸಾಧಿಸಲು ಸಾಧ್ಯ ಎನ್ನುವುದಾಗಿದೆ’ ಎಂದು ತಿಳಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ಉಪನಿರ್ದೇಶಕ ಬಿ.ಎಸ್.ವೆಂಕಟಾಚಲಪತಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !