ಶನಿವಾರ, ಸೆಪ್ಟೆಂಬರ್ 25, 2021
22 °C

ಬಸ್‌‌–ಬೈಕ್‌ ಮುಖಾಮುಖಿ ಡಿಕ್ಕಿ: ಮೂವರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪೇಟೆ: ಪಟ್ಟಣದ ಹೊರವಲಯದ ಹೇಮಗಿರಿ ಮುಖ್ಯರಸ್ತೆ, ಸಾಧುಗೋನಹಳ್ಳಿ ಗ್ರಾಮದ ಬಳಿ ಭಾನುವಾರ ಬೈಕ್ ಹಾಗೂ ಸಾರಿಗೆ ಸಂಸ್ಥೆ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್‌ ಸವಾರ, ಹಿಂಬದಿ ಕುಳಿತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಪಟ್ಟಣದ ಅಂಬೇಡ್ಕರ್ ನಗರದ ನಿವಾಸಿಗಳಾದ ಕೃಷ್ಣ (40), ಪತ್ನಿ ಗೌರಿ (30), ಗೌರಿ ತಾಯಿ ಜಯಮ್ಮ (55) ಮೃತಪಟ್ಟವರು. ಕೃಷ್ಣ ಬಳ್ಳೇಕೆರೆ ಗ್ರಾಮದವರಾಗಿದ್ದು ಉದ್ಯೋಗ ನಿಮಿತ್ತ ಪಟ್ಟಣದ ಅಂಬೇಡ್ಕರ್ ನಗರದಲ್ಲಿ ವಾಸವಾಗಿದ್ದರು. ಭಾನುವಾರ ಸಂಬಂಧಿಕರ ಆರೋಗ್ಯ ವಿಚಾರಿಸಲು ಮೂವರೂ ಪಟ್ಟಣದಿಂದ ಬಂಡಿಹೊಳೆ ಗ್ರಾಮಕ್ಕೆ ಹೊರಟಿದ್ದರು.

ಸಾಧುಗೋನಹಳ್ಳಿಯ ತಿರುವು ಮತ್ತು ಇಳಿಜಾರು ರಸ್ತೆಯಲ್ಲಿ ಎದುರಿನಿಂದ ಬಂದ ಬಸ್‌ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೋಲಿಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಆನಂದೇಗೌಡ ಸ್ಥಳಕ್ಕೆ ಭೇಟಿ ನೀಡಿದ್ದರು.
ಬಸ್‌ ಚಾಲಕ ತಲೆಮರೆಸಿಕೊಂಡಿದ್ದಾನೆ. ಮೃತದಂಪತಿಗೆ ಇಬ್ಬರು ಸಣ್ಣ ಮಕ್ಕಳಿದ್ದು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು