ಮಂಗಳವಾರ, ಆಗಸ್ಟ್ 11, 2020
27 °C

‘ಸಮವಸ್ತ್ರದಲ್ಲಿ ಆರ್‌ಎಸ್‌ಎಸ್‌’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೋಲ್ಕತ್ತ: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಕಾರ್ಯಕರ್ತರಿಗೆ ಭದ್ರತಾ ಪಡೆಯ ಸಮವಸ್ತ್ರ ತೊಡಿಸಿ ಪಶ್ಚಿಮ ಬಂಗಾಳದಲ್ಲಿ ಭದ್ರತಾ ವ್ಯವಸ್ಥೆಗೆ ನಿಯುಕ್ತಿಗೊಳಿಸಿರಬಹುದು ಎಂಬ ಸಂದೇಹವನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವ್ಯಕ್ತಪಡಿಸಿದ್ದಾರೆ.

‘ಭದ್ರತಾ ಪಡೆಯ ಯೋಧರ ಬಗ್ಗೆ ನನಗೆ ಗೌರವ ಇದೆ. ಅವರು ಇಂಥ ಕೆಲಸ ಮಾಡಲು ಹೇಗೆ ಸಾಧ್ಯ? ಬಿಜೆಪಿ ಪರ ಮತಯಾಚಿಸುವುದು ಅವರ ಕೆಲಸವೇ? ಅಂಥ ಕೆಲಸ ಮಾಡಲು ಅವರಿಗೆ ನಾಚಿಕೆಯಾಗಬೇಕು. ಆರ್‌ಎಸ್‌ಎಸ್‌, ಬಿಜೆಪಿ ಕಾರ್ಯಕರ್ತರಿಗೆ ಭದ್ರತಾಪಡೆಯ ಸಮವಸ್ತ್ರ ತೊಡಿಸಿ ಪಶ್ಚಿಮ ಬಂಗಾಳದ ಭದ್ರತಾ ವ್ಯವಸ್ಥೆಯ ಜವಾಬ್ದಾರಿ ನೀಡಲಾಗಿದೆ. ಮತದಾರರ ಮೇಲೆ ಪ್ರಭಾವ ಬೀರುವಂತೆ ಅವರ ಮೇಲೆ ಒತ್ತಡ ಹೇರಲಾಗಿದೆ ಎಂಬ ಬಲವಾದ ಸಂದೇಹ ನನ್ನಲ್ಲಿ ಮೂಡಿದೆ’ ಎಂದು ಮಮತಾ ಭಾನುವಾರ ಆರೋಪಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು