ಸೋಮವಾರ, ಸೆಪ್ಟೆಂಬರ್ 16, 2019
26 °C

ಸಿದ್ದರಾಮಯ್ಯ ವಿರುದ್ಧ ಮಾತನಾಡಿಲ್ಲ: ಜಿಟಿಡಿ

Published:
Updated:
Prajavani

ಮೈಸೂರು: ‘ಸಿದ್ದರಾಮಯ್ಯ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ನನಗೆ ಅಪಾರ ಗೌರವ ಇದೆ. ಎಚ್.ವಿಶ್ವನಾಥ್ ಹೇಳಿಕೆಗೆ ಅಷ್ಟೊಂದು ಮಹತ್ವ ನೀಡುವುದು ಬೇಡ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಸೋಮವಾರ ಇಲ್ಲಿ ಹೇಳಿದರು.

‘ಸಿದ್ದರಾಮಯ್ಯ ಅವರು ನನ್ನ ಕುರಿತು ಟ್ವೀಟ್ ಮಾಡಿದ್ದಾರಂತೆ. ಅದನ್ನು ನಾನು ಗಮನಿಸಿಲ್ಲ. ಅವರು ಏಕೆ ನನ್ನ ಹೆಸರು ಹೇಳಿದ್ದಾರೋ ಗೊತ್ತಿಲ್ಲ’ ಎಂದರು.

‘ಐದು ವರ್ಷ ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಎಂಬುದಾಗಿ ಸಿದ್ದರಾಮಯ್ಯ ಈಗಾಗಲೇ ಹೇಳಿದ್ದಾರೆ. ಇನ್ಯಾಕೆ ಬೇರೆ ಮಾತು? ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಮಾತನಾಡಬೇಕು‌. ಮೇ 23ರ ಫಲಿತಾಂಶ ಬರುವವರೆಗೆ ಯಾರು ಏನೇ ಹೇಳಿದರೂ ಪ್ರಯೋಜನವಿಲ್ಲ’ ಎಂದು ನುಡಿದರು.

‘ದೇವಸ್ಥಾನಕ್ಕೆ ಹೋಗುವುದು ಸುದ್ದಿಯೇ? ಯಡಿಯೂರಪ್ಪ ಅವರು ದೇಗುಲಗಳಿಗೆ ಹೋಗಿಲ್ಲವೇ? ಆ ಬಗ್ಗೆ ಏಕಿಷ್ಟು ಟೀಕೆ’ ಎಂದ ಅವರು, ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಡೆಯನ್ನು ಸಮರ್ಥಿಸಿಕೊಂಡರು.

Post Comments (+)