ಶನಿವಾರ, ಸೆಪ್ಟೆಂಬರ್ 18, 2021
24 °C
ಲಾಹೋರ್‌ನ ಸೂಫಿ ದೇಗುಲದ ಮೇಲೆ ಆತ್ಮಾಹುತಿ ದಾಳಿ

ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಹೋರ್‌ : ಪಾಕಿಸ್ತಾನದ ಲಾಹೋರ್‌ನಲ್ಲಿರುವ ಪ್ರಾಚೀನ ಸೂಫಿ ದೇಗುಲ ದಾತಾ ದರ್ಬಾರ್‌ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ ಮಡಿದವರ ಸಂಖ್ಯೆ 13ಕ್ಕೆ ಏರಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಹಿರ್‌ ಅಸ್ಲಂ (18) ಇಲ್ಲಿನ ಮೆಯೊ ಆಸ್ಪತ್ರೆಯಲ್ಲಿ ಸೋಮವಾರ ಅಸುನೀಗಿದ್ದಾರೆ. 

‘ದಾಳಿಯ ಕುರಿತು ಭದ್ರತಾ ಪಡೆಗಳು ನಡೆಸುತ್ತಿರುವ ತನಿಖೆಯಲ್ಲಿ ಈವರೆಗೆ ಯಾವುದೇ ಪ್ರಗತಿ ಕಂಡು ಬಂದಿಲ್ಲ’ ಎಂದು ಹೆಸರು ಬಹಿರಂಗಪಡಿಸಲು ಬಯಸದ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು