ಶುಕ್ರವಾರ, ಸೆಪ್ಟೆಂಬರ್ 24, 2021
21 °C

ದುಬೈನಲ್ಲಿ ಭಾರತೀಯ ಮಹಿಳೆ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದುಬೈ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಭಾರತೀಯ ಮಹಿಳೆಯೊಬ್ಬರು ಅಸುನೀಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಬೆಟ್ಟಿ ರೀಟಾ ಫರ್ನಾಂಡಿಸ್‌ (42) ಅವರು ಎಡಭಾಗದ ಪೃಷ್ಠ ಬದಲಿ ಶಸ್ತ್ರಚಕಿತ್ಸೆಗಾಗಿ ಇಲ್ಲಿನ ಅಲ್‌ ಜಹ್ರಾ ಆಸ್ಪತ್ರೆಗೆ ಮೇ 9ರಂದು ದಾಖಲಾಗಿದ್ದರು. ಇದಾಗಿ, ಎರಡು ಗಂಟೆಗಳ ನಂತರ ಅವರು ಸಾವಿಗೀಡಾಗಿದ್ದಾರೆ ಎಂದು ಗಲ್ಫ್‌ ನ್ಯೂಸ್‌ ಸಂಸ್ಥೆ ವರದಿ ಮಾಡಿದೆ.

ಮುಂಬೈನ ಫರ್ನಾಂಡಿಸ್‌ ದುಬೈನಲ್ಲಿ ಶೆಫ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಹುಟ್ಟಿದಾಗಿನಿಂದ ಪೃಷ್ಠಗಳು ಏರುಪೇರಾಗಿದ್ದವು. ಈ ಕಾರಣಕ್ಕಾಗಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ಕುಟುಂಬದ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು