ದುರ್ನಾತ ತಪ್ಪಿಸಿ: ಎನ್‌ಜಿಟಿ ಆದೇಶ

ಗುರುವಾರ , ಮೇ 23, 2019
31 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಮಾಲಿನ್ಯ ನಿಯಂತ್ರಣಾ ಮಂಡಳಿಗೆ ಎನ್‌ಜಿಟಿ ಆದೇಶ

ದುರ್ನಾತ ತಪ್ಪಿಸಿ: ಎನ್‌ಜಿಟಿ ಆದೇಶ

Published:
Updated:

ಬೆಂಗಳೂರು: ಘನ ತ್ಯಾಜ್ಯ ನಿರ್ವಹಣಾ ಘಟಕದ ದುರ್ವಾಸನೆ ಸಮಸ್ಯೆಯಿಂದ ಮುಕ್ತಿ ನೀಡುವಂತೆ ಒತ್ತಾಯಿಸಿ ಎಲೆಕ್ಟ್ರಾನಿಕ್ ಸಿಟಿಯ ಚಿಕ್ಕನಾಗಮಂಗಲದ ನಿವಾಸಿಗಳು ನಡೆಸುತ್ತಿದ್ದ ಹೋರಾಟಕ್ಕೆ ಫಲ ಸಿಗುವ ಕಾಲಸನ್ನಿಹಿತವಾಗಿದೆ.

ಈ ಘಟಕದಿಂದ ಹೊರ ಹೊಮ್ಮುವ ದುರ್ವಾಸನೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಾ ಮಂಡಳಿಗೆ (ಕೆಎಸ್‌ಪಿಸಿಬಿ) ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶಿಸಿದೆ.

‘ನಾವು ಒಂದು ತಿಂಗಳಲ್ಲಿ ಎನ್‌ಜಿಟಿಗೆ ವರದಿ ಸಲ್ಲಿಸಬೇಕಿದೆ. ಅದಕ್ಕೂ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವರಣೆ ಕೇಳಲಾಗುವುದು’ ಎಂದು ಕೆಎಸ್‌ಪಿಸಿಬಿ ಅಧಿಕಾರಿಗಳು ತಿಳಿಸಿದರು.

ಸಾರ್ವಜನಿಕರ ದೂರು ಆಧರಿಸಿ ಕೆಎಸ್‌ಪಿಸಿಬಿ ಅಧಿಕಾರಿಗಳು ಮಾರ್ಚ್‌ನಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ದುರ್ವಾಸನೆ ತಡೆಯಲು ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಗೆ ಸೂಚನೆ ನೀಡಿದ್ದರು.

‘ಈ ಘಟಕದ ಬಳಿ ದುರ್ನಾತ ಅಸಹನೀಯವಾಗಿದೆ. ಮಳೆ ಬಂದರೆ ದುರ್ವಾಸನೆ ಹೆಚ್ಚಾಗುತ್ತದೆ. ಎರಡು ವಾರಗಳಿಂದ ಮಳೆ ಬೀಳುತ್ತಿದೆ. ಆ ಬಳಿಕ ಈ ಪ್ರದೇಶದಲ್ಲಿ ವಾಸಿಸುವುದು ನರಕಸದೃಶ ಎನಿಸಿದೆ’ ಎಂದು ಎಲೆಕ್ಟ್ರಾನಿಕ್ ಸಿಟಿ ರೈಸಿಂಗ್‌ನ ಸದಸ್ಯ ಪಿ.ದುಬೆ ಹೇಳಿದರು.

‘ಎನ್‌ಜಿಟಿ ಆದೇಶದ ನಂತರವಾದರೂ ಸಮಸ್ಯೆಗೆ ಪರಿಹಾರ ಸಿಗಬಹುದು’ ಎಂದು ಸ್ಥಳೀಯ ನಿವಾಸಿಗಳು ಆಶಾವಾದ ವ್ಯಕ್ತಪಡಿಸಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !