ಶುಕ್ರವಾರ, ಸೆಪ್ಟೆಂಬರ್ 17, 2021
24 °C

ಇಂದಿನಿಂದ ವಾಕ್ಸಮರ ಸ್ಥಗಿತ; ಎಲ್ಲರಿಗೂ ಜ್ಞಾನೋದಯವಾಗಿದೆ: ಜಿ.ಟಿ.ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ‘ಇವತ್ತಿನಿಂದ ಮೈತ್ರಿ ಪಕ್ಷಗಳ ನಾಯಕರು ವಾಕ್ಸಮರ ಸ್ಥಗಿತಗೊಳಿಸಲಿದ್ದಾರೆ. ಹಿರಿಯ ಮುಖಂಡರು ಕುಳಿತು ಮಾತನಾಡಿದ್ದು ಎಲ್ಲರಿಗೂ ಜ್ಞಾನೋದಯವಾಗಿದೆ. ಎರಡೂ ಪಕ್ಷಗಳ ಮುಖಂಡರು ಒಂದಾಗಿದ್ದು ಒಂದೇ ತಟ್ಟೆಯಲ್ಲಿ ಊಟ ಮಾಡುವ ಕಾಲ ಬಂದಿದೆ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಮಂಗಳವಾರ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕು ನಿಮಿಷಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಅವರು ಸುದ್ದಿಗಾರರ ಜೊತೆ ಮಾತನಾಡಿ ‘ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿಕೊಂಡು ಮುನ್ನಡೆಯುವ ನಿರ್ಧಾರ ಕೈಗೊಂಡಿದ್ದೇವೆ. ಅಸಮಾಧಾನ, ವಾಕ್ಸಮರ ಈಗ ಎಲ್ಲವೂ ಮುಗಿದ ಅಧ್ಯಾಯ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನಾಲ್ಕು ವರ್ಷ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಾರೆ. ಮೇ 23ರಂದು ಎಲ್ಲರೂ ದೇಶದ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಫಲಿತಾಂಶದಿಂದ ರಾಜ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ’ ಎಂದು ಹೇಳಿದರು.

‘ಸರ್ಕಾರ ಬಂದ ದಿನದಿಂದಲೂ ಸರ್ಕಾರ ಬೀಳುತ್ತದೆ ಎನ್ನುತ್ತಿದ್ದಾರೆ. ಮೇ 23ರ ನಂತರವೂ ಸರ್ಕಾರ ಮುಂದುವರಿಯಲಿದೆ. ಈ ವರ್ಷವೂ ರಾಜ್ಯದಲ್ಲಿ ಮಳೆ, ಬೆಳೆ ಚೆನ್ನಾಗಿ ಆಗಲಿದೆ. ಅದಕ್ಕಾಗಿ ನಿಮಿಷಾಂಬ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. ಶ್ರೀಮತಿಯೊಂದಿಗೆ ದೇವಾಲಯಕ್ಕೆ ಬಂದು ಸಂತೋಷವಾಯಿತು. ಅರ್ಚಕರು 101 ಕಳಶಕ್ಕೆ ಅಭಿಷೇಕ ಮಾಡುವುದನ್ನು ನೋಡಿ ಸಂತಸವಾಯಿತು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು