ಶುಕ್ರವಾರ, ಸೆಪ್ಟೆಂಬರ್ 20, 2019
27 °C

ಬಸ್‌ ಪಾಸ್: ಆನ್‌ಲೈನ್ ನೋಂದಣಿ ಆರಂಭ

Published:
Updated:

ಬೆಂಗಳೂರು: ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್‌ ಸೌಲಭ್ಯ ಒದಗಿಸಿಕೊಡುವ ಸಂಬಂಧ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ನಲ್ಲಿ ನೋಂದಣಿ ಕಡ್ಡಾಯವಾಗಿದ್ದು, ಬುಧವಾರದಿಂದ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ತಿಳಿಸಿದೆ.

ಶಿಕ್ಷಣ ಸಂಸ್ಥೆಗಳು ತಲಾ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಿ ಆ ಸಂಸ್ಥೆಯ ವಿದ್ಯಾರ್ಥಿಗಳು ಸಲ್ಲಿಸುವ ಅರ್ಜಿಗಳಿಗೆ ಅನುಮೋದನೆ ನೀಡಬೇಕು. ಎಲ್ಲಾ ಶಿಕ್ಷಣ ಸಂಸ್ಥೆಯವರು (1ರಿಂದ 10ನೇ ತರಗತಿವರೆಗೂ ರಾಜ್ಯ ಪಠ್ಯಕ್ರಮ ಹೊಂದಿರುವ ಶಾಲೆಗಳನ್ನು ಬಿಟ್ಟು) ಬಿಎಂಟಿಸಿ ವೆಬ್‌ಸೈಟ್‌ www.mybmtc.com/wwwmybmtc.karnataka.gov.in ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಿದೆ.

Post Comments (+)