ಗುರುವಾರ , ಸೆಪ್ಟೆಂಬರ್ 19, 2019
26 °C
ಹೆದ್ದಾರಿಯಲ್ಲಿ ಬಿದ್ದ ಮರ: ಸಂಚಾರಕ್ಕೆ ಜನರ ಪರದಾಟ

ಕೊಡಗಿನಲ್ಲಿ ಧಾರಾಕಾರ ಮಳೆ

Published:
Updated:
Prajavani

ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಗುರುವಾರ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಕೊಡಗಿನಿಂದ ಕೇರಳ ಸಂಪರ್ಕಿಸುವ ಅಂತರ ರಾಜ್ಯ ಹೆದ್ದಾರಿಯಲ್ಲಿ ಗಾಳಿಗೆ ಬೃಹತ್‌ ಮರಬಿದ್ದು ಕೆಲವು ತಾಸು ಸಂಚಾರ ವ್ಯತ್ಯಯವಾಗಿತ್ತು. 

ಸಂಜೆ ಬೀಸಿದ ಭಾರಿ ಗಾಳಿಗೆ ಮಾಕುಟ್ಟದ ಅಂಚೆ ಕಚೇರಿಯ ಬಳಿಯ ಹೆದ್ದಾರಿಯಲ್ಲಿ ಮರ ಬಿದ್ದಿದ್ದರಿಂದ ಎರಡೂ ಬದಿಯ ವಾಹನ ಸವಾರರು, ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು.

ರಾತ್ರಿ ವೇಳೆಗೆ ಮರ ತೆರವು ಮಾಡಿ ಪ್ರಯಾಣಿಕರನ್ನು ಕಳುಹಿಸಲಾಯಿತು. ಕಳೆದ ವರ್ಷ ಸುರಿದ ಮಹಾಮಳೆಗೆ ಇದೇ ಅಂತರ ರಾಜ್ಯ ಹೆದ್ದಾರಿ ಯಲ್ಲಿ ಭೂಕುಸಿತ ಉಂಟಾಗಿತ್ತು. ಮರಗಳ ಬೇರುಗಳು ಸಡಿಲಗೊಂಡಿದ್ದು ಸಾಧಾರಣ ಮಳೆ ಹಾಗೂ ಗಾಳಿಗೂ ಮರಗಳು ಉರುಳಿ ಬೀಳುತ್ತಿವೆ.

ಸೋಮವಾರಪೇಟೆ ತಾಲ್ಲೂಕಿನ ಕುಂಬೂರು, ಮಾದಾಪುರ, ಚಟ್ಟಳ್ಳಿ, ಸುಂಟಿಕೊಪ್ಪ, ಗರಗಂದೂರು, ಹರದೂರು ಹಾಗೂ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ವ್ಯಾಪ್ತಿಯಲ್ಲಿ ಒಂದು ತಾಸು ಮಳೆ ಅಬ್ಬರಿಸಿ ತಂಪೆರೆಯಿತು.

ಮಡಿಕೇರಿ ನಗರ, ನಾಪೋಕ್ಲು, ಭಾಗಮಂಡಲ, ಕಾಟಕೇರಿ, ಅಪ್ಪಂಗಳ, ಚೇರಂಬಾಣೆ, ಕರ್ಣಂಗೇರಿ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. 

ಮೈಸೂರು ಜಿಲ್ಲೆಯ ವಿವಿಧೆಡೆ ಗುರುವಾರ ಸಂಜೆ ಬಿರುಸಿನ ಮಳೆಯಾಗಿದೆ. ನಂಜನಗೂಡು ತಾಲ್ಲೂಕಿನ ಕೋಣನೂರು ಗ್ರಾಮ
ದಲ್ಲಿ ಬುಧವಾರ ತಡರಾತ್ರಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದ್ದು, ಎರಡು ಮನೆಗಳು ಕುಸಿದಿವೆ.

 

Post Comments (+)