ಬುಧವಾರ, ಸೆಪ್ಟೆಂಬರ್ 18, 2019
22 °C

ಪುಲ್ವಾಮಾ: ಮೂವರು ಬಲಿ

Published:
Updated:

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಬಳಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್‌ –ಎ ಮಹಮ್ಮದ್‌ ಸಂಘಟನೆಯ ಮೂವರು ಉಗ್ರರು ಹತ್ಯೆಯಾಗಿದ್ದಾರೆ. ಈ ವೇಳೆ ಒಬ್ಬ ಯೋಧ ಹಾಗೂ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ.

ಈ ಪ್ರದೇಶದಲ್ಲಿ ಉಗ್ರರು ಅಡಗಿಸಿಟ್ಟಿದ್ದ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸ್‌ ವಕ್ತಾರರು ತಿಳಿಸಿದರು.

ಪುಲ್ವಾಮಾ ಜಿಲ್ಲೆಯ ಡೆಲಿಪೊರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತ ನಿಖರ ಮಾಹಿತಿ ಆಧರಿಸಿ ಗುರುವಾರ ಬೆಳಿಗ್ಗೆಯಿಂದಲೇ ಪೊಲೀಸ್‌ ಮತ್ತು ಭದ್ರತಾ ಪಡೆ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯಾಚರಣೆ ಕೈಗೊಂಡಿದ್ದವು. ಈ ಪ್ರದೇಶದಲ್ಲಿ ಉಗ್ರರು ಅಡಗಿದ್ದ ಮನೆಯ ಸುತ್ತಮುತ್ತಲಿನ ಮನೆಗಳ ಜನರನ್ನು ಭದ್ರತಾ ಪಡೆಯ ಸಿಬ್ಬಂದಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿದ್ದರು. ಈ ವೇಳೆ ಬಚ್ಚಿಟ್ಟುಕೊಂಡಿದ್ದ ಉಗ್ರರು ಏಕಾಏಕಿ ಗುಂಡಿನ ಮಳೆ ಸುರಿಸಿದರು.

Post Comments (+)