ತಲಾಖ್: ಮುಸ್ಲಿಂ ಮಹಿಳೆಯ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

ಸೋಮವಾರ, ಮೇ 20, 2019
30 °C

ತಲಾಖ್: ಮುಸ್ಲಿಂ ಮಹಿಳೆಯ ಅರ್ಜಿ ವಿಚಾರಣೆಗೆ ‘ಸುಪ್ರೀಂ’ ಒಪ್ಪಿಗೆ

Published:
Updated:

ನವದೆಹಲಿ: ‍ಪತಿ ನೀಡಿದ್ದ ಎರಡು ತಲಾಖ್ ಪ್ರಶ್ನಿಸಿ ಮುಸ್ಲಿಂ ಮಹಿಳೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಕೊಂಡಿದೆ. ಈ ವಿಚಾರ ಸಂಬಂಧ ಪತಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆಯೂ ಸೂಚಿಸಿದೆ. 

ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಸಂಜೀವ್ ಖನ್ನಾ ಅವರ ನ್ಯಾಯಪೀಠ ಹೇಳಿದೆ. 

‘ಮಹಿಳೆ 2009ರಲ್ಲಿ ಮುಸ್ಲಿಂ ಪದ್ಧತಿ ಅನುಸಾರ ವಿವಾಹವಾಗಿದ್ದಾರೆ. ಅವರಿಗೆ 9 ವರ್ಷದ ಮಗ ಹಾಗೂ 6 ವರ್ಷದ ಮಗಳು ಇದ್ದಾರೆ. ಪತಿ ಮಾರ್ಚ್‌ 25 ಹಾಗೂ ಮೇ 7ರಂದು ತಲಾಖ್ ನೀಡಿದ್ದಾರೆ’ ಎಂದು ಮಹಿಳೆ ಪರ ವಕೀಲರು ನ್ಯಾಯಪೀಠಕ್ಕೆ ತಿಳಿಸಿದ್ದಾರೆ. 

ದೆಹಲಿ ನಿವಾಸಿಯಾಗಿರುವ ಮಹಿಳೆ, ‘ಹೆಚ್ಚಿನ ವರದಕ್ಷಿಣೆ ಹಾಗೂ ಕಾರು ತರಬೇಕೆಂದು ಅತ್ತೆ–ಮಾವ ಹಾಗೂ ಪತಿ ಕಿರುಕುಳ ನೀಡಲಾರಂಭಿಸಿದರು’ ಎಂದು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪತಿ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ಅವರು ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದ್ದರು. 

ಈ ಜ.12ರಂದು ಹೊರಡಿಸಲಾಗಿರುವ ಮುಸ್ಲಿಂ ಮಹಿಳಾ (ವೈವಾಹಿಕ ಹಕ್ಕುಗಳ ರಕ್ಷಣೆ) ಮಸೂದೆ ಸುಗ್ರೀವಾಜ್ಞೆ ಸಹ ನನ್ನ ಪರವಾಗಿ ಇದೆ ಎಂದು ಅವರು ಹೇಳಿದ್ದಾರೆ. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 11

  Happy
 • 2

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !