ಯಾವುದೇ ಅನಾಹುತ ಸಂಭವಿಸಲ್ಲ: ಸಾ.ರಾ.ಮಹೇಶ್‌

ಭಾನುವಾರ, ಜೂನ್ 16, 2019
28 °C

ಯಾವುದೇ ಅನಾಹುತ ಸಂಭವಿಸಲ್ಲ: ಸಾ.ರಾ.ಮಹೇಶ್‌

Published:
Updated:
Prajavani

ಮೈಸೂರು: ‘ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಮತ್ತೆ ಅನಾಹುತ ಉಂಟಾಗಬಹುದೆಂದು ಕೆಲವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಈ ಬಾರಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ ಎಂಬ ವರದಿಯನ್ನು ವಿಕೋಪ ನಿರ್ವಹಣಾ ವಿಭಾಗ ನೀಡಿದೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ಮಡಿಕೇರಿಯಲ್ಲಿ ಹೆಚ್ಚು ಮಳೆ ಬಂದರೆ ಬೆಂಗಳೂರು, ಮೈಸೂರು ಜನರಿಗೆ ಕುಡಿಯಲು ಹಾಗೂ ರೈತರಿಗೆ ನೀರು ಸಿಗುತ್ತದೆ. ಹೀಗಾಗಿ, ಮಳೆ ಬರಲಿ ಎಂದು ಪ್ರಾರ್ಥಿಸೋಣ’ ಎಂದರು.

‘ಈಚೆಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಕೂಡ ಮಡಿಕೇರಿಯಲ್ಲಿ ವಾಸ್ತವ್ಯ ಹೂಡಿದ್ದರು. ಈ ಮೂಲಕ ಕೊಡಗು ಜಿಲ್ಲೆಯು ಪ್ರವಾಸಿಗಳಿಗೆ ಸುರಕ್ಷಿತವಾಗಿದೆ ಎಂಬ ಸಂದೇಶ ರವಾನಿಸಿದ್ದಾರೆ’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !