23ರಂದು ವಿಪಕ್ಷಗಳ ಸಭೆ ಸೋನಿಯಾ ಅಖಾಡಕ್ಕೆ

ಶುಕ್ರವಾರ, ಮೇ 24, 2019
22 °C

23ರಂದು ವಿಪಕ್ಷಗಳ ಸಭೆ ಸೋನಿಯಾ ಅಖಾಡಕ್ಕೆ

Published:
Updated:
Prajavani

ನವದೆಹಲಿ: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲು ಇನ್ನೇನು ಒಂದು ವಾರ ಇದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯ ನಾಯಕನ ಆಯ್ಕೆಗಾಗಿ ವಿರೋಧ ಪಕ್ಷಗಳಲ್ಲಿ ಸಹಮತ ಮೂಡಿಸಲು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಖಾಡ ಪ್ರವೇಶಿಸಿದ್ದಾರೆ. 

ಬಿಜೆಪಿ ನೇತೃತ್ವದ ಎನ್‌ಡಿಎಯನ್ನು ಚುನಾವಣೆಯಲ್ಲಿ ಸೋಲಿಸುವ ಉತ್ಸಾಹದಲ್ಲಿ ವಿರೋಧಪಕ್ಷಗಳು ಇವೆಯಾದರೂ ಫಲಿತಾಂಶದ ಬಳಿಕ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಕೆಲ ಜಾಣ ನಡೆ ಅಗತ್ಯ ಎಂಬ ಅರಿವೂ ವಿರೋಧ ಪಕ್ಷಗಳಲ್ಲಿ ಇದೆ. 

ಮಿತ್ರ ಪಕ್ಷಗಳಾದ ಜೆಡಿಎಸ್‌, ಎನ್‌ಸಿಪಿ, ಡಿಎಂಕೆ, ಆರ್‌ಜೆಡಿ ಮುಖಂಡರಿಗೆ ಸೋನಿಯಾ ಅವರು ಪತ್ರ ಬರೆದಿದ್ದಾರೆ. ಫಲಿತಾಂಶ ಪ್ರಕಟಣೆಯ ದಿನವಾದ ಮೇ 23ರಂದು ಸೇರಲಿರುವ ಸಭೆಗೆ ಬರುವಂತೆ ಮನವಿ ಮಾಡಿದ್ದಾರೆ. 

ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಮತ್ತು ವೈಎಸ್‌ಆರ್ ಕಾಂಗ್ರೆಸ್‌ ಮುಖ್ಯಸ್ಥ ವೈ.ಎಸ್.ಜಗನ್‌ ಮೋಹನ್ ರೆಡ್ಡಿ ಅವರೊಂದಿಗೆ ಸಂಪರ್ಕದಲ್ಲಿ ಇರುವಂತೆ ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌ ಅವರನ್ನು ಕೋರಲಾಗಿದೆ ಎಂದು ತಿಳಿದು ಬಂದಿದೆ. ಈ ಇಬ್ಬರ ಜತೆಗೆ ಪವಾರ್‌ ಅವರು ಉತ್ತಮ ಬಾಂಧವ್ಯ ಹೊಂದಿದ್ದಾರೆ. 

‘ನಮ್ಮ ಪಕ್ಷಕ್ಕೆ ಪ್ರಧಾನಿ ಹುದ್ದೆ ಸಿಗುವುದಿಲ್ಲ ಎಂದಾದರೂ ಸಮಸ್ಯೆ ಇಲ್ಲ’ ಎಂದು ಕಾಂಗ್ರೆಸ್‌ನ ಹಿರಿಯ ಮುಖಂಡ ಗುಲಾಂ ನಬಿ ಆಜಾದ್‌ ಬುಧವಾರ ಹೇಳಿದ್ದರು. ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲಾ ಇದಕ್ಕೆ ಪ್ರತಿಕ್ರಿಯಿಸಿ, ‘23ರಂದು ಎಲ್ಲ ಸ್ಪಷ್ಟವಾಗಲಿದೆ. ಅಲ್ಲಿಯವರೆಗೆ ಕಾಯಿರಿ’ ಎಂದಿದ್ದಾರೆ. 

ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ತೃತೀಯ ರಂಗ ಕಟ್ಟುವ ಪ್ರಯತ್ನ ಗಂಭೀರ ಅಲ್ಲ ಎಂದು ಕಾಂಗ್ರೆಸ್‌ ಹೇಳಿದೆ.

ಬರಹ ಇಷ್ಟವಾಯಿತೆ?

 • 10

  Happy
 • 0

  Amused
 • 0

  Sad
 • 0

  Frustrated
 • 2

  Angry

Comments:

0 comments

Write the first review for this !