ಕಬ್ಬನ್‌ ಪಾರ್ಕ್‌ ಈಜುಕೊಳ ನಿರ್ಮಾಣಕ್ಕೆ ತಡೆ

ಶನಿವಾರ, ಮೇ 25, 2019
22 °C

ಕಬ್ಬನ್‌ ಪಾರ್ಕ್‌ ಈಜುಕೊಳ ನಿರ್ಮಾಣಕ್ಕೆ ತಡೆ

Published:
Updated:

ಬೆಂಗಳೂರು: ಕಬ್ಬನ್ (ಚಾಮರಾಜೇಂದ್ರ) ಪಾರ್ಕ್‌ನಲ್ಲಿರುವ ಕರ್ನಾಟಕ ಸರ್ಕಾರದ ಸಚಿವಾಲಯ (ಕೆಜಿಎಸ್) ಕ್ಲಬ್‌ನಲ್ಲಿ ಈಜುಕೊಳ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ಮಾಧವ ನಗರದ ಎಂ.ಕೆ.ನಿಯಾಜುದ್ದೀನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಮತ್ತು ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

‘ಕಾಮಗಾರಿಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಳ್ಳಬೇಕು’ ಎಂದು ಆದೇಶಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ‍್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸೇರಿದಂತೆ ಏಳು ಜನ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿದೆ.

ಮನವಿ ಏನು?: ‘ಕಬ್ಬನ್‌ ಉದ್ಯಾನದಲ್ಲಿ ಈಜುಕೊಳ ನಿರ್ಮಾಣ ಕಾಮಗಾರಿ ಕೈಗೊಂಡಿರುವುದು ಕರ್ನಾಟಕ ಉದ್ಯಾನ, ಆಟದ ಮೈದಾನ ಮತ್ತು ಮುಕ್ತ ಪ್ರದೇಶಗಳ (ಸಂರಕ್ಷಣೆ ಮತ್ತು ನಿಯಂತ್ರಣ) ಕಾಯ್ದೆ–1985ರ ಸ್ಪಷ್ಟ ಉಲ್ಲಂಘನೆಯಾಗಿದೆ. ತಕ್ಷಣವೇ ಕಾಮ
ಗಾರಿ ಸ್ಥಗಿತಗೊಳಿಸುವಂತೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಮನವಿ. ‘ಕ್ಲಬ್‌ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದ್ದು, ಇದೇ 19ರಂದು ಇಲ್ಲಿ ರಮ್ಮಿ ಟೂರ್ನಿ ನಡೆಯಲಿದೆ. ಇದನ್ನು ನಿರ್ಬಂಧಿಸಬೇಕು’ ಎಂದು ಮಧ್ಯಂತರ ಮನವಿ ಮಾಡಲಾಗಿದೆ. ಅರ್ಜಿದಾರರ ಪರ ವಕೀಲ ಎಂ.ಕೆ.ಗಿರೀಶ್‌ ವಾದ ಮಂಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !