ಕೃಷಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ಬದಲಾವಣೆ ಇಲ್ಲ

ಸೋಮವಾರ, ಮೇ 27, 2019
28 °C

ಕೃಷಿ ಪ್ರಾಯೋಗಿಕ ಪರೀಕ್ಷೆ ದಿನಾಂಕ ಬದಲಾವಣೆ ಇಲ್ಲ

Published:
Updated:

ಬೆಂಗಳೂರು: ಕೃಷಿಕರ ಕೋಟಾದ ಪ್ರಾಯೋಗಿಕ ಪರೀಕ್ಷೆ ದಿನಾಂಕ ಬದಲಾವಣೆ ಇಲ್ಲ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ನಾರಾಯಣಗೌಡ ತಿಳಿಸಿದರು.

ಪ್ರಾಯೋಗಿಕ ಪರೀಕ್ಷೆಯ ದಿನದಂದೇ (ಮೇ 18), ಅಖಿಲ ಭಾರತ ವಾಕ್‌ ಶ್ರವಣ ಸಂಸ್ಥೆಯ ಪ್ರವೇಶ ಪರೀಕ್ಷೆ ಇರುವುದರಿಂದ, ಪ್ರಾಯೋಗಿಕ ಪರೀಕ್ಷೆ ದಿನಾಂಕ ಮುಂದೂಡಬೇಕು ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರು.

ಈಗಾಗಲೇ ಪ್ರಕಟಿಸಿರುವ ದಿನಾಂಕದಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಬಗ್ಗೆ ಯಾವುದೇ ಗೊಂದಲ ಬೇಕಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕೃಷಿ ಕೋಟಾದ ಪ್ರಾಯೋಗಿಕ ಪರೀಕ್ಷೆಯ ದಿನಾಂಕವನ್ನು ಕೃಷಿ ವಿಶ್ವವಿದ್ಯಾಲಯಗಳೇ ನಿಗದಿ ಮಾಡುತ್ತವೆ, ಇದರಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪಾತ್ರ ಇಲ್ಲ ಎಂದು ತಿಳಿಸಿದೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !