ಮಂಗಳವಾರ, ಆಗಸ್ಟ್ 20, 2019
25 °C

ಧರ್ಮಸ್ಥಳದಲ್ಲೂ ನೀರಿನ ಅಭಾವ: ಪ್ರವಾಸ ಮುಂದೂಡುವಂತೆ ಜನರಿಗೆ ಹೆಗ್ಗಡೆ ಮನವಿ

Published:
Updated:

ಮಂಗಳೂರು: ರಾಜ್ಯದ ಪ್ರಮುಖ ಯಾತ್ರಾ ಸ್ಥಳವಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲೂ ನೀರಿನ ತೀವ್ರ ಅಭಾವ ಎದುರಾಗಿದೆ. ಈ ಕಾರಣದಿಂದ ಕೆಲವು ದಿನಗಳ ಮಟ್ಟಿಗೆ ಪ್ರವಾಸ ಮುಂದೂಡುವಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಜನರಿಗೆ ಮನವಿ ಮಾಡಿದ್ದಾರೆ.

‘ಬೇಸಿಗೆಯ ಬಿಸಿಲಿನ ತೀವ್ರತೆಯಿಂದ ದೇಶದಾದ್ಯಂತ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತವು ರೇಷನಿಂಗ್‌ ಮೂಲಕ ನೀರು ಪೂರೈಸುತ್ತಿದೆ. ವಾರಕ್ಕೆ ಎರಡು ಅಥವಾ ಮೂರು ದಿನಗಳ ಕಾಲವಷ್ಟೇ ನೀರು ಪೂರೈಸಲಾಗುತ್ತಿದೆ. ಧರ್ಮಸ್ಥಳದಲ್ಲೂ ಕೂಡಾ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ನೇತ್ರಾವತಿ ನದಿಯಲ್ಲಿ ನೀರಿನ ಹರಿವು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ’ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

Post Comments (+)