ಮಕ್ಕಳ ಹಕ್ಕುಗಳ ಅರಿವು ಅಗತ್ಯ

ಸೋಮವಾರ, ಮೇ 20, 2019
33 °C

ಮಕ್ಕಳ ಹಕ್ಕುಗಳ ಅರಿವು ಅಗತ್ಯ

Published:
Updated:
Prajavani

ಚಿಕ್ಕಬಳ್ಳಾಪುರ: ಅಂತರರಾಷ್ಟ್ರೀಯ ಮಕ್ಕಳ ಸಹಾಯವಾಣಿ 1098 ದಿನಾಚರಣೆ ಪ್ರಯುಕ್ತ ನಗರದ ಸರ್ಕಾರಿ ಬಸ್ ನಿಲ್ದಾಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಸಿವಿಲ್ ಹಿರಿಯ ನ್ಯಾಯಾಧೀಶ ಎಚ್.ದೇವರಾಜ್ ಅವರು ಚಾಲನೆ ನೀಡಿದರು.

ಮಕ್ಕಳ ಸಹಾಯವಾಣಿ ಸಿಬ್ಬಂದಿ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಸಹಾಯವಾಣಿ ಕಾರ್ಯವೈಖರಿ, ಮಕ್ಕಳ ಹಕ್ಕುಗಳು, ಮಕ್ಕಳಿಗೆ ಇರುವ ಕಾನೂನುಗಳು ಮತ್ತು ಬಾಲ್ಯ ವಿವಾಹ, ಮಕ್ಕಳ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯದ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದರು.

ವಕೀಲರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ತಮ್ಮೇಗೌಡ, ಕಾರ್ಯದರ್ಶಿ ವಿನೋದ್ ಕುಮಾರ್ ಉಪಾಧ್ಯಕ್ಷ ಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಲಕ್ಷ್ಮೀದೇವಮ್ಮ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂರಕ್ಷಣಾಧಿ ಉಸ್ಮಾನ್, ಮಕ್ಕಳ ಸಹಾಯವಾಣಿ ನಿರ್ದೇಶಕ ಬಾಲಗಂಗಾಧರ್, ಬಚ್ಪನ್ ಬಚಾವೋ ಅಭಿಯಾನದ ರಾಜ್ಯ ಸಂಚಾಲಕಿ ಬಿನು ವರ್ಗಿಸ್, ಸಮಾಜ ಸೇವಕ ಮಂಚನಬಲೆ ಎಂ.ವಿ ಸದಾಶಿವ, ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕ ಜಿ.ವಿ ಸಂದೀಪ್, ಚಿಂತಾಮಣಿ ಉಪಕೇಂದ್ರದ ಸುನಿತಾ ಹಾಜರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !