ಬುಧವಾರ, ಫೆಬ್ರವರಿ 26, 2020
19 °C

ನಾಯ್ಡು–ರಾಹುಲ್‌ ಭೇಟಿ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮತಎಣಿಕೆ ದಿನ ಹತ್ತಿರವಾದಂತೆ ವಿರೋಧಪಕ್ಷಗಳ ಕಾರ್ಯಚಟುವಟಿಕೆ ಚುರುಕುಗೊಂಡಿದ್ದು, ಟಿಡಿಪಿ
ಅಧ್ಯಕ್ಷ ಎನ್‌.ಚಂದ್ರಬಾಬು ನಾಯ್ಡು ಅವರು ಶನಿವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿ ಆಗಲಿದ್ದಾರೆ.

ಬಿಎಸ್‌ಪಿ ಅಧ್ಯಕ್ಷೆ ಮಾಯಾವತಿ, ಎಸ್‌ಪಿ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರನ್ನೂ ಅದೇ ದಿನ ನಾಯ್ಡು ಭೇಟಿ ಮಾಡಲಿದ್ದಾರೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ, ಎಎಪಿ ಮುಖ್ಯಸ್ಥ ಅರವಿಂದ ಕೇಜ್ರೀವಾಲ್ ಅವರನ್ನು ಶುಕ್ರವಾರ ಭೇಟಿಯಾಗಿದ ಅವರು ಫಲಿತಾಂಶ ನಂತರದ ಕಾರ್ಯತಂತ್ರವನ್ನು ಚರ್ಚಿಸಿದರು. ಆಂಧ್ರಪ್ರದೇಶದಲ್ಲಿ ಚುನಾವಣಾ ಪ್ರಕ್ರಿಯೆ ಕುರಿತು ದೂರು ದಾಖಲಿಸಲು ಚುನಾವಣಾ ಆಯೋಗದ ಭೇಟಿಗೆ ಆಗಮಿಸಿದ್ದ ನಾಯ್ಡು, ಉದ್ಭವಿಸಬಹುದಾದ ರಾಜಕೀಯ ಸ್ಥಿತಿ, ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರವಿಡುವ ಕ್ರಮ ಕುರಿತು ಮುಖಂಡರ ಜೊತೆ ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಬಿಜೆಪಿಯನ್ನು ದೂರವಿಡಲು ಬಯಸುವ ಯಾವುದೇ ಪಕ್ಷದ ಜತೆಗೆ ಮೈತ್ರಿಗೆ ಸಿದ್ಧ ಎಂದು ಅವರು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು