ಮೂರು ಕಡೆ ಮರು ಮತದಾನ

ಬುಧವಾರ, ಮೇ 22, 2019
32 °C

ಮೂರು ಕಡೆ ಮರು ಮತದಾನ

Published:
Updated:

ತಿರುವನಂತಪುರ: ಕೇರಳದ ಮೂರು ಮತಗಟ್ಟೆಗಳಲ್ಲಿ ಮರು ಮತದಾನ ನಡೆಸಲು ಚುನಾವಣಾ ಆಯೋಗ ಶುಕ್ರವಾರ ಸೂಚನೆ ನೀಡಿದೆ.

ಕಾಸರಗೋಡು ಜಿಲ್ಲೆಯ ತ್ರಿಕರಿಪ್ಪುರ ಕ್ಷೇತ್ರದ ಒಂದು ಮತಗಟ್ಟೆ ಹಾಗೂ ಕಣ್ಣೂರು ಜಿಲ್ಲೆಯ ಧರ್ಮಡಂ ಕ್ಷೇತ್ರದ ಎರಡು ಮತಗಟ್ಟೆಗಳಲ್ಲಿ ಮೇ 19ರಂದು ಮರು ಮತದಾನ ನಡೆಸಲಾಗುವುದು.

ಈ ಮತಗಟ್ಟೆಗಳಲ್ಲಿ ಸಿಪಿಎಂ ಹಾಗೂ ಮುಸ್ಲಿಂ ಲೀಗ್‌ ಕಾರ್ಯಕರ್ತರು ನಕಲಿ ಮತದಾನ ನಡೆಸಿದ್ದಾರೆ ಎಂಬ ಆರೋಪವು ಸಾಬೀತಾಗಿರುವುದರಿಂದ ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ. ಒಬ್ಬನೇ ವ್ಯಕ್ತಿ ಬೇರೆಬೇರೆ ಮತಗಟ್ಟೆಗಳಲ್ಲಿ ಮತ ಚಲಾಯಿಸಿದ ವಿಡಿಯೊ ಈ ಹಿಂದೆಯೇ ವೈರಲ್‌ ಆಗಿತ್ತು. ನಕಲಿ ಮತದಾನ ಮಾಡಿದವರ ವಿರುದ್ಧ
ದೂರು ದಾಖಲಿಸುವ ಪ್ರಕ್ರಿಯೆಗೂ ಚಾಲನೆ ನೀಡಲಾಗಿದೆ.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !