ಕೈಗಾರಿಕೆಗಳ ವಿರುದ್ಧ ಪ್ರಕರಣ

ಮಂಗಳವಾರ, ಮೇ 21, 2019
31 °C
ತ್ಯಾಜ್ಯ ನೀರು ಸಂಸ್ಕರಣೆಯಲ್ಲಿ ವಿಫಲ

ಕೈಗಾರಿಕೆಗಳ ವಿರುದ್ಧ ಪ್ರಕರಣ

Published:
Updated:

ಬೆಂಗಳೂರು: ರಾಸಾಯನಿಕಯುಕ್ತ ಕಲುಷಿತ ನೀರು ಹಾಗೂ ತ್ಯಾಜ್ಯ ನೀರನ್ನು ನಿಯಮಾನುಸಾರ ಸಂಸ್ಕರಿಸದ 331 ಕೈಗಾರಿಕೆ ಹಾಗೂ ಅಪಾರ್ಟ್‌ಮೆಂಟ್‌ ಸಮುಚ್ಚಯಗಳ ವಿರುದ್ಧ ‌ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಪ್ರಕರಣ ದಾಖಲಿಸಿ, ನೋಟಿಸ್ ಜಾರಿಮಾಡಿದೆ. ಅದೇ ರೀತಿ, ನಿಯಮ ಉಲ್ಲಂಘಿಸುತ್ತಿರುವರಿಗೆ ದಂಡದ ಬಿಸಿ ಮುಟ್ಟಿಸಲು ಮುಂದಾಗಿದೆ. 

ಕೈಗಾರಿಕೆಗಳು ಹೊರಹಾಕುವ ರಾಸಾಯನಿಕಯುಕ್ತ ನೀರು ಸಂಸ್ಕರಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ 2018ರಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಆದೇಶ ಹೊರಡಿಸಿತ್ತು. ಅಪಾರ್ಟ್‌ಮೆಂಟ್‌ ಸಮುಚ್ಚಯಗಳ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕಗಳ ಪರಿಶೀಲನೆ ಮಾಡುವಂತೆಯೂ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಕೆಎಸ್‌ಪಿಸಿಬಿ 44 ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿತ್ತು. ಕಳೆದ ಆರು ತಿಂಗಳಲ್ಲಿ ಅಧಿಕಾರಿಗಳು 5,656 ಘಟಕಗಳ ಪರಿಶೀಲನೆ ನಡೆಸಿದ್ದಾರೆ.

ಅಧಿಕಾರಿಗಳು ನೀಡಿದ ವರದಿಯನ್ನು ಕೆಎಸ್‌ಪಿಸಿಬಿಯು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಿದೆ. ಅನುಮೋದನೆ ಪಡೆದ ಕೈಗಾರಿಕೆಗಳಲ್ಲಿ 3,265 ಕೈಗಾರಿಕೆಗಳು ಸಂಸ್ಕರಣಾ ಘಟಕಗಳನ್ನು ಹೊಂದಿದೆ. 203 ಕೈಗಾರಿಕೆಗಳು ಈವರೆಗೂ ಘಟಕವನ್ನು ನಿರ್ಮಿಸಿಕೊಂಡಿಲ್ಲ. ಅದೇ ರೀತಿ, 68 ಘಟಕಗಳು ನಿಯಮವನ್ನು ಅನುಸರಿಸುತ್ತಿಲ್ಲ. ‌

ಅಪಾರ್ಟ್‌ಮೆಂಟ್‌ ಸಮುಚ್ಚಯಗಳಲ್ಲಿ ತ್ಯಾಜ್ಯ ನೀರಿನ ಸಂಸ್ಕರಣೆ ಕೂಡ ವೈಜ್ಞಾನಿಕವಾಗಿ ನಡೆಯುತ್ತಿಲ್ಲ. 2,586 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳಿದ್ದು, 59 ಅನುಪಯುಕ್ತವಾಗಿವೆ. ಕಳೆದ ವರ್ಷ ಮಂಡಳಿಯು 99 ಅಪಾರ್ಟ್‌ಮೆಂಟ್‌ ಸಮುಚ್ಚಯಗಳಿಗೆ ನೋಟಿಸ್ ಜಾರಿ ಮಾಡಿತ್ತು. ಕಲುಷಿತ ನೀರನ್ನು ನೇರವಾಗಿ ಜಲಮೂಲಗಳಿಗೆ ಬಿಡುತ್ತಿರುವುದೇ ಇದಕ್ಕೆ ಪ್ರಮುಖ ಕಾರಣ. 

‘ಕೈಗಾರಿಕೆಗಳ ಕೊಳಚೆ ನೀರು ಸಂಸ್ಕರಣಾ ಘಟಕಗಳಲ್ಲಿ ಹೆಚ್ಚಾಗಿ ನಿಯಮ ಉಲ್ಲಂಘನೆ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ನಿಯಮ ಉಲ್ಲಂಘಿಸಿದವರಿಗೆ ನೋಟಿಸ್ ಜಾರಿ ಮಾಡಲಾಗುತ್ತಿದೆ’ ಎಂದು ಕೆಎಸ್‌ಪಿಸಿಬಿ ಸದಸ್ಯ ಕಾರ್ಯದರ್ಶಿ ಮನೋಜ್ ಕುಮಾರ್ ತಿಳಿಸಿದರು. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !