ಆಸ್ಪತ್ರೆಗಳಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ

ಬುಧವಾರ, ಜೂನ್ 26, 2019
22 °C

ಆಸ್ಪತ್ರೆಗಳಲ್ಲಿನ ನೀರಿನ ಸಮಸ್ಯೆ ಬಗೆಹರಿಸಲು ಸೂಚನೆ

Published:
Updated:

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನೀರಿನ ಸಮಸ್ಯೆಯನ್ನು ಪರಿಹರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ಬಹುತೇಕ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ರೋಗಿಗಳು ಹಾಗೂ ಅವರ ಕುಟುಂಬದ ಸದಸ್ಯರು ನೀರಿಗೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಗೆ ಕೂಡಲೇ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

‘ಕೊಳವೆಬಾವಿಯ ರಿಪೇರಿ ಮಾಡಬೇಕಾದಲ್ಲಿ ಅಧಿಕಾರಿಗಳು ತಮ್ಮ ಹಂತದಲ್ಲಿಯೇ ಇರುವ ಅನುದಾನವನ್ನು ಬಳಸಿ, ಪುನರುಜ್ಜೀವನಗೊಳಿಸಬೇಕು. ಸಾಧ್ಯವಾಗದಿದ್ದಲ್ಲಿ ಹೊಸ ಕೊಳವೆ ಬಾವಿಯನ್ನು ತೋಡಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ಟ್ಯಾಂಕರ್‌ಗಳ ಮೂಲಕ ಅಥವಾ ಶುದ್ಧೀಕರಿಸಿದ ನೀರನ್ನು ಕ್ಯಾನ್‌ಗಳ ಮೂಲಕ ಆಸ್ಪತ್ರೆಗಳಿಗೆ ಪೂರೈಕೆ ಮಾಡಬೇಕು’ ಎಂದು ಅವರು ಆದೇಶಿಸಿದ್ದಾರೆ. 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !