ಮಣಿಪುರ: ಮೈತ್ರಿ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲು ಎನ್‌ಪಿಎಫ್‌ ಚಿಂತನೆ

ಭಾನುವಾರ, ಜೂನ್ 16, 2019
22 °C

ಮಣಿಪುರ: ಮೈತ್ರಿ ಸರ್ಕಾರಕ್ಕೆ ಬೆಂಬಲ ಹಿಂಪಡೆಯಲು ಎನ್‌ಪಿಎಫ್‌ ಚಿಂತನೆ

Published:
Updated:

ಕೋಹಿಮಾ/ ಇಂಫಾಲ್‌ (ಪಿಟಿಐ): ಬಿಜೆಪಿ ನೇತೃತ್ವದ ಮಣಿಪುರದ ಮೈತ್ರಿಕೂಟದ ಸರ್ಕಾರಕ್ಕೆ ನೀಡಿರುವ ಬೆಂಬಲ ಹಿಂದಕ್ಕೆ ಪಡೆಯಲು ನಾಗಾ ಪೀಪಲ್ಸ್‌ ಫ್ರಂಟ್‌ (ಎನ್‌ಪಿಎಫ್‌) ಮುಂದಾಗಿದ್ದು, ಲೋಕಸಭೆಯ ಚುನಾವಣೆ ಪ್ರಕ್ರಿಯೆ ಸಂಪೂರ್ಣ ಮುಕ್ತಾಯವಾದ ನಂತರ ನಿರ್ಧಾರ ತೆಗೆದುಕೊಳ್ಳಲಿದೆ.

‘ಎನ್‌ಪಿಎಫ್‌ ಹಿರಿಯ ನಾಯಕರ ಸಭೆ ಕೋಹಿಮಾದಲ್ಲಿ ಶನಿವಾರ ನಡೆದಿದ್ದು, ಮೈತ್ರಿ ಸರ್ಕಾರದಲ್ಲಿ ಮುಂದುವರಿಯಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಚರ್ಚೆ ನಡೆಸಿತು. ಸಭೆಯಲ್ಲಿ ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ’ ಎಂದು ಎನ್‌ಪಿಎಫ್‌ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

‘ಬಿಜೆಪಿ ನಮ್ಮ ನಾಯಕರ ಸಲಹೆಗೆ ಗೌರವ ಕೊಡುತ್ತಿಲ್ಲ. ಎನ್‌ಪಿಎಫ್‌ ಜತೆಗೆ ಬಿಜೆಪಿಯವರ ನಡವಳಿಕೆಯಲ್ಲಿ ಹೊಂದಾಣಿಕೆ ಕಂಡುಬರುತ್ತಿಲ್ಲ. ಆದ್ದರಿಂದ ಕಳೆದ ಫೆಬ್ರುವರಿ ತಿಂಗಳಿನಿಂದ ನಾವು ಪರಾಮರ್ಶೆ ಸಭೆ ನಡೆಸುತ್ತ ಬಂದಿದ್ದೇವೆ. ಮೈತ್ರಿ ಸರ್ಕಾರದಿಂದ ಹೊರಗೆಬರುವ ಬಗ್ಗೆ ಚಿಂತನೆ ನಡೆಸಿದ್ದೇವೆ’ ಎಂದು ಎನ್‌ಪಿಎಫ್‌ ವಕ್ತಾರ ಅಕುಂಬೆಮೊ ಕಿಕೊನ್‌ ಅವರು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 5

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !