ವಿದ್ಯಾರ್ಥಿಗಳಿಗೆ ಶಿಬಿರಗಳು ತುಂಬಾ ಪ್ರಯೋಜನಕಾರಿ

ಭಾನುವಾರ, ಜೂನ್ 16, 2019
28 °C
ಬೀಡಗಾನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಉಚಿತ ಬೇಸಿಗೆ ಶಿಬಿರದ ಸಮಾರೋಪ

ವಿದ್ಯಾರ್ಥಿಗಳಿಗೆ ಶಿಬಿರಗಳು ತುಂಬಾ ಪ್ರಯೋಜನಕಾರಿ

Published:
Updated:
Prajavani

ಚಿಕ್ಕಬಳ್ಳಾಪುರ: ‘ಬೇಸಿಗೆ ಶಿಬಿರಗಳು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿವೆ’ ಎಂದು ಕ್ಷೆತ್ರ ಶಿಕ್ಷಣಾಧಿಕಾರಿ ಶಾಂತಲಾ ಅವರು ತಿಳಿಸಿದರು.

ತಾಲ್ಲೂಕು ಬಾಲಭವನ ಸೊಸೈಟಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಬೀಡಗಾನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಯೋಜಿಸಿದ್ದ ತಾಲ್ಲೂಕು ಮಟ್ಟದ ಉಚಿತ ಬೇಸಿಗೆ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

‘ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು 12 ದಿನಗಳ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ಚಿತ್ರಕಲೆ, ಕರಕುಶಲೆ, ಕರಾಟೆ, ನೃತ್ಯ, ಯೋಗ, ಜೇಡಿ ಮಣ್ಣಿನ ಕಲೆ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ನೀಡಲಾಗಿದೆ. ಇದರಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಹೆಚ್ಚಿನ ಪ್ರಯೋಜನ ಪಡೆದಂತಾಗಿದೆ’ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂರಕ್ಷಣಾಧಿಕಾರಿ ನೌತಾಜ್, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಗೋವಿಂದಪ್ಪ, ಸದಸ್ಯರಾದ ವೆಂಕಟೇಶ್, ರಮೇಶ್, ಈರಪ್ಪ, ಮಂಜುನಾಥ್, ಮುಖ್ಯ ಶಿಕ್ಷಕ ಮಂಜುನಾಥ್, ಸಹ ಶಿಕ್ಷಕರು ಹಾಗೂ ಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !