ಸಮಗ್ರ ವರದಿ ನೀಡಲು ಯುಜಿಸಿ ಸೂಚನೆ

ಬುಧವಾರ, ಜೂನ್ 19, 2019
23 °C

ಸಮಗ್ರ ವರದಿ ನೀಡಲು ಯುಜಿಸಿ ಸೂಚನೆ

Published:
Updated:

ನವದೆಹಲಿ:ವಿಶ್ವವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇಲ್ಲಿಯವರೆಗೆ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣ ಹಾಗೂ ಅವುಗಳ ಸ್ಥಿತಿಗತಿ ವರದಿ ನೀಡುವಂತೆವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಸೂಚನೆ ನೀಡಿದೆ.

ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಲ್ಲಿ ರಚನೆಯಾಗಿರುವ ಆಂತರಿಕ ದೂರುಗಳ ಸಮಿತಿ ಬಗ್ಗೆಯೂ ವರದಿ ನೀಡು
ವಂತೆಯೂ ನಿರ್ದೇಶನ ನೀಡಿದೆ.

ಲಿಂಗ ಆಧಾರಿತ ಹಿಂಸೆ ತಡೆಗೆ ಆಂತರಿಕ ದೂರು ಸಮಿತಿ ಮತ್ತು ವಿಶೇಷ ಘಟಕ ರಚನೆ ಮಾಡಲು ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳು ಕೇಳಿಕೊಂಡಿದ್ದವು. ನಂತರ ಲಿಂಗ ಸಮಾನತೆ ಅರಿವು ಕಾರ್ಯಕ್ರಮ ಆಯೋಜಿಸಲು ಸೂಚನೆ ನೀಡಲಾಗಿತ್ತು ಎಂದು ಯುಜಿಸಿ ಕಾರ್ಯದರ್ಶಿ ರಜನೀಶ್‌ ಜೈನ್‌ ತಿಳಿಸಿದ್ದಾರೆ.

ಮಾರ್ಚ್ 31ರ ತನಕ ಎಷ್ಟು ದೂರುಗಳು ದಾಖಲಾಗಿ ಎಂಬ ಮಾಹಿತಿ ನೀಡಲು ಸೂಚನೆ ನೀಡಲಾಗಿದ್ದು, ಜುಲೈ 31ರೊಳಗೆ ದೂರುಗಳ ಸ್ಥಿತಿಗತಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ ಎಂದೂ ಜೈನ್‌ ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !