‘ಆರೋಗ್ಯ ಜಾಗೃತಿ ಮೂಡಿಸಿ’

ಗುರುವಾರ , ಜೂನ್ 20, 2019
26 °C
ಶಾಲಾ–ಕಾಲೇಜುಗಳಿಗೆ ಸಲಹೆ

‘ಆರೋಗ್ಯ ಜಾಗೃತಿ ಮೂಡಿಸಿ’

Published:
Updated:

ನವದೆಹಲಿ: ಮಾನಸಿಕ ಆರೋಗ್ಯ ಮತ್ತು ಕ್ಯಾನ್ಸರ್‌, ಮಧುಮೇಹ ಮತ್ತು ರಕ್ತದೊತ್ತಡದಂತಹ ಕಾಯಿಲೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ವಿಶೇಷ ಉಪನ್ಯಾಸ, ಪ್ರದರ್ಶನ, ಯೋಗ ಮತ್ತು ಆರೋಗ್ಯ ಶಿಬಿರದಂತಹ ಕಾರ್ಯಕ್ರಮಗಳನ್ನು ನಿಯಮಿತವಾಗಿ ಹಮ್ಮಿಕೊಳ್ಳಬೇಕು ಎಂದು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಶಾಲಾ–ಕಾಲೇಜುಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.

ದೀರ್ಘಕಾಲ ಕಾಡುವಂತಹ ರೋಗಗಳನ್ನು ಪ್ರಾರಂಭದಲ್ಲಿಯೇ ಪತ್ತೆ ಹಚ್ಚಿದರೆ ಸಕಾಲಕ್ಕೆ ಚಿಕಿತ್ಸೆ ನೀಡುವುದಕ್ಕೆ ಸಾಧ್ಯವಾಗುತ್ತದೆ
ಎಂಬ ಉದ್ದೇಶದಿಂದ ವಿದ್ಯಾರ್ಥಿಗಳಿಗಾಗಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಸಚಿವಾಲಯ ಹೇಳಿದೆ. 

ಈ ಕುರಿತು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಸಚಿವಾಲಯವು, ತಂಬಾಕು ಮುಕ್ತ ಶಾಲಾ–ಕಾಲೇಜು ಆವರಣ, ಶಾಲಾ–ಕಾಲೇಜು ಕ್ಯಾಂಟೀನ್‌ಗಳಲ್ಲಿ ಸಿಹಿ ತಿಂಡಿ ನಿರ್ಬಂಧ ವಿಧಿಸುವುದು ಮತ್ತು ಮಾನಸಿಕ ಆರೋಗ್ಯ ಕುರಿತಂತೆ ಆಪ್ತಸಮಾಲೋಚನೆ ಶಿಬಿರ ನಡೆಸಬೇಕು ಎಂದು ಸಲಹೆ ನೀಡಿದೆ. 

ಶಾಲಾ–ಕಾಲೇಜು ಆವರಣಗಳಲ್ಲಿ ಯೋಗ ಮತ್ತು ನಿಯಮಿತ ವ್ಯಾಯಾಮದಂತಹ ಚಟುವಟಿಕೆ ಹಮ್ಮಿಕೊಳ್ಳುವುದು ಹಾಗೂ ವಾಯುಮಾಲಿನ್ಯ ಮುಕ್ತ ವಾತಾವರಣ ನಿರ್ಮಿಸುವುದಕ್ಕೂ ಆದ್ಯತೆ ನೀಡಬೇಕು ಎಂದೂ ಸಚಿವಾಲಯ ಹೇಳಿದೆ.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !