ಶೆಲ್‌ ದಾಳಿ ನಡೆಸಿದ ಪಾಕ್‌: ಬಿಎಸ್‌ಎಫ್‌ ಅಧಿಕಾರಿಗೆ ಗಾಯ

ಮಂಗಳವಾರ, ಜೂನ್ 25, 2019
26 °C

ಶೆಲ್‌ ದಾಳಿ ನಡೆಸಿದ ಪಾಕ್‌: ಬಿಎಸ್‌ಎಫ್‌ ಅಧಿಕಾರಿಗೆ ಗಾಯ

Published:
Updated:

ಜಮ್ಮು: ಪಾಕಿಸ್ತಾನ ಯೋಧರು ಗಡಿ ನಿಯಂತ್ರಣ ರೇಖೆ ಬಳಿ ನಡೆಸಿದ ಶೆಲ್‌ ದಾಳಿಯಲ್ಲಿ ಬಿಎಸ್‌ಎಫ್‌ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದಾರೆ.

ಪೂಂಚ್‌ ಜಿಲ್ಲೆಯ ಕೃಷ್ಣ ಘಾಟಿ ವಲಯದ ಬಾಲೋನಿಯಲ್ಲಿ ಸಹಾಯಕ ಸಬ್‌ ಇನ್‌ಸ್ಪೆಕ್ಟರ್‌ (ಎಸ್‌ಎಸ್‌ಐ) ಸತ್ಯಪಾಲ್‌ ಸಿಂಗ್‌ ಅವರು ಶುಕ್ರವಾರ ರಾತ್ರಿ ಭದ್ರತೆ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಮೋರ್ಟರ್‌ ಶೆಲ್ ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಕಾರಿಗಳು ತಿಳಿಸಿದ್ದಾರೆ.

ತಕ್ಷಣವೇ ಸಿಂಗ್ ಅವರನ್ನು ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ. ಭಾರತದ ಯೋಧರು ಪ್ರತಿದಾಳಿ ನಡೆಸಿದ್ದು, ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !